ಕಾನ್‌ಸ್ಟೆಬಲ್‌ಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಡಿಜಿ ಕಚೇರಿ ಸ್ಯಾನಿಟೈಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.1- ಸೆಂಟ್ರಿಯೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯನ್ನು ಸ್ಯಾನಿಟೈಸರ್ ಮಾಡಲಾಗುತ್ತಿದೆ. ಡಿಜಿ ಕಚೇರಿಯ ಹಿಂಬದಿ ಗೇಟ್‍ನಲ್ಲಿ ಸೆಂಟ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಾನ್‍ಸ್ಟೆಬಲ್ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.

ಕಾನ್‍ಸ್ಟೆಬಲ್ ಶಿವಾಜಿನಗರದ ಪೊಲೀಸ್ ಕ್ವಾಟ್ರ್ರಸ್‍ನಲ್ಲಿ ವಾಸಿಸುತ್ತಿದ್ದರಿಂದ ರ್ಯಾಂಡಮ್ ಪರೀಕ್ಷೆಗೊಳಪಡಿಸಿದ ಸಂದರ್ಭದಲ್ಲಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಕಾನ್‍ಸ್ಟೆಬಲ್‍ಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಪತ್ತೆ ಕಾರ್ಯಾಚರಣೆಯನ್ನು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೈಗೊಂಡಿದ್ದರು.

ಕಾನ್‍ಸ್ಟೆಬಲ್ ಕುಟುಂಬ ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಹೋಮ್ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.  ಕಾನ್‍ಸ್ಟೆಬಲ್ ಕರ್ತವ್ಯ ನಿರ್ವಹಿಸುತ್ತಿದ್ದ ಡಿಜಿ ಕಚೇರಿಗೆ ನಿನ್ನೆ ಮತ್ತು ಇಂದು ರಾಸಾಯನಿಕ ಸಿಂಪಡಣೆ ಮಾಡಲಾಗಿದೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ಡಿಜಿ ಕಚೇರಿಯನ್ನು ಸ್ಯಾನಿಟೈಸರ್ ಮಾಡಲು ಸೂಚಿಸಲಾಗಿದೆ.

Facebook Comments