ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಡಿಜಿಪಿ-ಐಜಿ ನೀಲಮಣಿ

ಈ ಸುದ್ದಿಯನ್ನು ಶೇರ್ ಮಾಡಿ

Neelamani

ಬೆಂಗಳೂರು, ಜೂ.1- ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ (ಡಿಜಿಪಿ ಮತ್ತು ಐಜಿ) ನೀಲಮಣಿ ಎನ್.ರಾಜು ಹಾಗೂ ಡಿಜಿಪಿ (ಗುಪ್ತವಾರ್ತೆ) ಅಮರ್‍ಕುಮಾರ್ ಪಾಂಡೆ ಅವರು ಇಂದು ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.  ಜೆ.ಪಿ.ನಗರದಲ್ಲಿರುವ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಈ ಇಬ್ಬರು ಅಧಿಕಾರಿಗಳು ರಾಜ್ಯದ ಕಾನೂನು ಸುವ್ಯಸ್ಥೆ ಕುರಿತಂತೆ ಮಾಹಿತಿ ನೀಡಿದ್ದಾರೆ.  ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಅವರು, ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಾಯಿತು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಭದ್ರತೆಗೆ ಸಂಬಂಧಿಸಿದಂತೆ ಹಲವು ಸಲಹೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ ಎಂದು ಹೇಳಿದರು.

Facebook Comments

Sri Raghav

Admin