ಪಕ್ಷಾಂತರಿಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ದೃವನಾರಾಯಣ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ನ.14- ನೆರೆಯ ರಾಜ್ಯಗಳಲ್ಲಿ ಪಕ್ಷಾಂತರಿಗಳಿಗೆ ಪಾಠ ಕಲಿಸಿರುವಂತೆಯೇ ನಮ್ಮ ರಾಜ್ಯದಲ್ಲೂ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಂಸದ ದೃವನಾರಾಯಣ ಹೇಳಿದ್ದಾರೆ.ಜಿಲ್ಲಾ ಪತ್ರಕರ್ತರ ಸಂಘದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ನೆರೆ ಆವರಿಸಿದ್ದರೂ ಸ್ವಾರ್ಥ ಸಾಧನೆಗಾಗಿ ಮುಂಬೈನ ಹೋಟೆಲ್‍ನಲ್ಲ ತಂಗಿದ್ದ ಇಂತಹ ಪಕ್ಷಾಂತರಿಗಳಿಗೆ ಆಯಾ ಕ್ಷೇತ್ರದ ಮತದಾರರು ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಡಿ.5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದೆ ಎಂದು ದೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಕ್ಷೇತ್ರವನ್ನು ಕೇಸರೀಕರಣ ಮಾಡಲು ಬಿಜೆಪಿ ಹೊರಟಿದೆ ಎಂದು ಅವರು ದೂರಿದ್ದಾರೆ.

Facebook Comments