‘ಧೃವನಾರಾಯಣ ಅವರಿಗಾಗಿ ನನ್ನ ಸ್ಥಾನ ಬಿಟ್ಟುಕೊಡಲು ಸಿದ್ಧ’

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮೇ 26- ಧೃವನಾರಾಯಣ ಅವರಿಗಾಗಿ ನನ್ನ ಸ್ಥಾನವನ್ನು ತ್ಯಜಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಧೃವನಾರಾಯಣ ಅವರು ಭಾರೀ ಪೈಫೋಟಿ ನೀಡಿ ಸೋಲನ್ನು ಅನುಭವಿಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಧೃವನಾರಾಯಣ ಅವರ ಸೇವೆ ಅಗತ್ಯವಿದೆ. ಇವರು ಉತ್ತಮ ಕೆಲಸವನ್ನು ಮಾಡಿದ್ದು, ಅಧಿಕಾರದಲ್ಲಿ ಇಲ್ಲದಿದ್ದರೆ ಕಷ್ಟ, ಹಾಗಾಗಿ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅವರಿಗಾಗಿ ಬಿಟ್ಟುಕೊಡುತ್ತೇನೆ ಎಂದು ಹೇಳಿದರು.

ಈ ವಿಷಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತಂದಿಲ್ಲ, ಪಕ್ಷದ ಜಿಲ್ಲಾಧ್ಯಕ್ಷರಿಗೆ ತಿಳಿಸಿದ್ದೇನೆ ಎಂದು ಹೇಳಿದರು. ನಾನು ಯಾವುದೇ ದುರುದ್ದೇಶದಿಂದ ಈ ತೀರ್ಮಾನವನ್ನು ಕೈಗೊಂಡಿಲ್ಲ.

ಪಕ್ಷದ ಸಂಘಟನೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ಈ ವಿಷಯವನ್ನು ಪಕ್ಷದವರ ಗಮನಕ್ಕೆ ತರುತ್ತೇನೆ. ಅವರು, ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧ . ಒಂದು ವೇಳೆ ಪಕ್ಷ ನನ್ನ ನಿರ್ಧಾರವನ್ನು ಒಪ್ಪಿದರೆ, ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.

Facebook Comments