ತಮಗೆ ನೈತಿಕ ಬೆಂಬಲ ನೀಡಿದ ವಿರೋಧ ಪಕ್ಷಗಳ ನಾಯಕರಿಗೆ ‘ಥ್ಯಾಂಕ್ಸ್’ ಹೇಳಿದ ದೀದಿ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ, ಮೇ 16 (ಪಿಟಿಐ)- ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರೋಡ್ ಶೋ ವೇಳೆ ಭುಗಿಲೆದ್ದ ವ್ಯಾಪಕ ಹಿಂಸಾಚಾರ ಮತ್ತು ಗಲಭೆ ನಂತರ ಬೆಳವಣಿಗೆಯಲ್ಲಿ ತಮಗೆ ನೈತಿಕ ಬೆಂಬಲ ನೀಡಿದ ವಿರೋಧ ಪಕ್ಷಗಳ ನಾಯಕರಿಗೆ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ಬಿಎಸ್‍ಪಿ ನಾಯಕಿ ಮಾಯಾವತಿ ಸೇರಿದಂತೆ ಮಹಾಘಟಬಂಧನ್ ಮುಖಂಡರು ನನಗೆ ನೈತಿಕ ಬೆಂಬಲ ನೀಡಿದ್ದಾರೆ. ಬಿಜೆಪಿ ವಿರುದ್ಧ ಧ್ವನಿ ಎತ್ತಲು ಇವರು ನನಗೆ ಸಾಥ್ ನೀಡಿದ್ದಾರೆ. ಅದಕ್ಕಾಗಿ ನಾನು ಇವರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ದೀದಿ ಹೇಳಿದ್ದಾರೆ.

ಗಲಭೆ ವೇಳೆ ಈಶ್ವರಚಂದ್ರ ವಿದ್ಯಾಸಾಗರ್ ಪ್ರತಿಮೆಯನ್ನು ಬಿಜೆಪಿ ಕಾರ್ಯಕರ್ತರು ಧ್ವಂಸ ಮಾಡಿದ್ದಾ ರೆಂದು ಆರೋಪಿಸಿ ಮಮತಾ ನಿನ್ನೆ ಸಂಜೆ ಕೋಲ್ಕತ್ತಾದಲ್ಲಿ ನಡೆಸಿದ ಪ್ರತಿಭಟನಾ ಮೆರವಣಿಗೆಗೆ ಬೆಂಬಲ ಸೂಚಿಸಿದ ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಮಮತಾ ಧನ್ಯವಾದ ಹೇಳಿದ್ದಾರೆ.

ಅಮಿತ್ ಷಾ ರೋಡ್ ಶೋ ವೇಳೆ ಟಿಎಂಸಿ ಕಾರ್ಯಕರ್ತರು ಬಿಜೆಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು. ಆನಂತರ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವೆ ಭಾರೀ ಘರ್ಷಣೆ ನಡೆದಿತ್ತು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ