ಶಿಥಿಲವಾದ ಕಾಂಪೌಂಡ್ ಹಾಗೂ ಕಟ್ಟಡಗಳ ತೆರವು : ಗೌರವ್ ಗುಪ್ತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.12- ಶಿಥಿಲವಾದ ಕಾಂಪೌಂಡ್ ಹಾಗೂ ಕಟ್ಟಡಗಳನ್ನು ತೆರವುಗೊಳಿಸು ಕಾರ್ಯವನ್ನು ಇಂದಿನಿಂದಲೇ ಆರಂಭಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇಂದಿಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದಲ್ಲಿರುವ ಸರ್ಕಾರಿ, ರೈಲ್ವೆ ಹಾಗೂ ಖಾಸಗಿ ಕಟ್ಟಡಗಳು ಶಿಥಿಲಗೊಂಡಿರುವುದನ್ನು ಪತ್ತೆ ಹಚ್ಚಿ ಅವುಗಳನ್ನು ತೆರವುಗೊಳಿಸುವ ಕಾರ್ಯ ಹಮ್ಮಿಕೊಳಲಾಗಿದೆ ಎಂದು ಹೇಳಿದರು.

ಇದರ ಜೊತೆಗೆ ಶಿಥಿಲ ಕಟ್ಟಡಗಳ ಪತ್ತೆ ಕಾರ್ಯವನ್ನು ಕೈಗೆತ್ತಿಕೊಳ್ಳುವಂತೆ ವಲಯ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಹಿಂದೆ 198 ಶಿಥಿಲ ಕಟ್ಟಡಗಳನ್ನು ಗುರುತಿಸಲಾಗಿತು. ಅವುಗಳ ಪೈಕಿ 10 ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಉಳಿದ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಬೃಹತ್ ಬೆಂಗಳೂರು ನಗರದಲ್ಲಿ ಲಕ್ಷಾಂತರ ಕಟ್ಟಡಗಳಿವೆ. ಕೆಲವು ಸಂದರ್ಭದಲ್ಲಿ ಅನಾಹುತಗಳು ಆಗುವುದು ಸಹಜ. ಇನ್ನು ಮುಂದೆ ಈ ರೀತಿಯ ಅನಾಹುತಗಳು ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

Facebook Comments