ನಟ ದಿಲೀಪ್ ಕುಮಾರ್’ಗೆ ನ್ಯೂಮೋನಿಯಾ

ಈ ಸುದ್ದಿಯನ್ನು ಶೇರ್ ಮಾಡಿ

DilipKumar

ಮುಂಬೈ, ಸೆ.6-ಎದೆ ಸೋಂಕಿನಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಹಿಂದಿ ಚಿತ್ರರಂಗದ ಹೆಸರಾಂತ ಅಭಿನೇತ ದಿಲೀಪ್ ಕುಮಾರ್ ಅವರಿಗೆ ನ್ಯೂಮೋನಿಯಾ ಇರುವುದು ಪತ್ತೆಯಾಗಿದ್ದು, ಅವರು ಆರೋಗ್ಯಕ್ಕೆ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ.  ಈ ವಿಷಯವನ್ನು ದಿಲೀಪ್ ಕುಮಾರ್ ಅವರ ಪತ್ನಿ ಸಾಯಿರಾ ಬಾನು ಇಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಿನ್ನೆ ಅನಾರೋಗ್ಯಕ್ಕೆ ಒಳಗಾದ ಅವರನ್ನು ಬಾಂದ್ರಾದ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರನ್ನು ತಪಾಸಣೆ ಮಾಡಿದ ವೈದ್ಯರಿಗೆ ದಿಲೀಪ್ ಕುಮಾರ್ ನ್ಯೂಮೋನಿಯಾದಿಂದ ಬಳಲುತ್ತಿರುವುದು ರೋಗ ನಿರ್ಧಾರ ಪರೀಕ್ಷೆಯಿಂದ ದೃಢಪಟ್ಟಿತು. ಅವರಿಗೆ ಚಿಕಿತ್ಸೆ ಮುಂದವರಿಸಲಾಗಿದೆ. ಅವರು ವೈದ್ಯಕೀಯ ಉಪಚಾರಕ್ಕೆ ಸ್ಪಂದಿಸುತ್ತಿದ್ದಾರೆ. ಅವರು ಶೀಘ್ರವೇ ಗುಣಮುಖರಾಗಲಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin