ಅನುಮಾನವೇ ಬೇಡ, ಮೈತ್ರಿ ಸರ್ಕಾರ ಅಧಿಕಾರಾವಧಿ ಪೂರ್ಣಗೊಳಿಸುತ್ತೆ : ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 19- ಲೋಕಸಭಾ ಚುನಾವಣಾ ಫಲಿತಾಂಶ ಒಳ್ಳೆಯ ರೀತಿ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿಶ್ವಾಸವನ್ನು ವ್ಯ ಕ್ತಪಡಿಸಿದ್ದಾರೆ. ರಾಜ್ಯದ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದ್ದೇವೆ.

ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ಮುನ್ನಡೆಸುವುದಾಗಿ ರಾಹುಲ್ ಗಾಂಧಿ ಅವರೊಂದಿಗೆ ನಡೆದ ಸಭೆಯ ಬಳಿಕ ಸುದ್ದಿಗಾರರಿಗೆ ಅವರು ತಿಳಿಸಿದರು.

ಸಮ್ಮಿಶ್ರ ಸರ್ಕಾರ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದೇಬರುತ್ತವೆ, ಎರಡೂ ಪಕ್ಷದ ನಾಯಕರು ಒಂದೆಡೆ ಕುಳಿತು ಸಮಸ್ಯೆಗಳನ್ನು ಪರಿಹರಿಸಿಕೊಳ್ಳುತ್ತೇವೆ.  ಕುಮಾರಸ್ವಾಮಿಯವರು ಅಧಿಕಾರವನ್ನು ಪೂರ್ಣಗೊಳಿಸುವ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ಕೇಂದ್ರದಲ್ಲಿ ಹೊಸ ಸರ್ಕಾರ ಬರುವ ಲಕ್ಷಣಗಳಿವೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಕಳೆದುಕೊಂಡು ಮನೆಗೆ ಹೋಗಲಿದ್ದಾರೆ. ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin