ದೇವೇಗೌಡರನ್ನು ಭೇಟಿಯಾದ ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮೇ 27-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿಯಾಗಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಮಾತುಕತೆ ನಡೆಸಿದರು.

ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಅವರು, ಲೋಕಸಭೆಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಫಲಿತಾಂಶದ ಪರಾಮರ್ಶೆ ಹಾಗೂ ಅತೃಪ್ತ ಶಾಸಕರ ಆಪರೇಷನ್ ಕಮಲ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರ ಗೊಂದಲ ಆತಂಕ ನಿವಾರಿಸಿ ಸರ್ಕಾರವನ್ನು ಸುಭದ್ರಗೊಳಿಸಿ ಮುನ್ನಡೆಸುವ ಕುರಿತಂತೆ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಡಿಸಿಎಂ ಪರಮೇಶ್ವರ್ ಹಾಗೂ ಶಾಸಕ ಕುಮಟಳ್ಳಿ ಜೊತೆ ಸಿಎಂ ಚರ್ಚೆ : ಬೆಂಗಳೂರು, ಮೇ 27- ಲೋಕಸಭಾ ಚುನಾವಣೆ ನಂತರದ ಬೆಳವಣಿಗೆ, ಸಂಪುಟ ವಿಸ್ತರಣೆ, ಕಾಯತಂತ್ರ ಸೇರಿದಂತೆ ಇನ್ನಿತರ ವಿಷಯಗಳ ಕುರಿತಂತೆ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ , ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಶಾಸಕ ಮಹೇಶ್‍ಕುಮಟಳ್ಳಿ ಮಾತುಕತೆ ನಡೆಸಿದರು.

ಮಾಜಿಪ್ರಧಾನಿ ಜವಾಹರಲಾಲ್ ನೆಹರೂ ಅವರ 55ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಬಳಿಯ ನೆಹರು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚರ್ಚೆ ನಡೆಸಿದರು.ಬಿಜೆಪಿ ಆಪರೇಷನ್ ಕಮಲ, ಸರ್ಕಾರದ ಅಸ್ಥಿರತೆ ಹಿನ್ನೆಲೆಯಲ್ಲಿ ಇವರ ಚರ್ಚೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕುಮಾರ್‍ಸ್ವಾಮಿ, ಪರಮೇಶ್ವರ್ ಅವರು, ಗಹನವಾದ ಚರ್ಚೆಯಲ್ಲಿ ತೊಡಗಿದ್ದರು.ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಹೇಶ್ ಕುಮಟಳ್ಳಿ ಸಹ ಇವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು.

ಕಾರ್ಯಕ್ರಮದಲ್ಲಿ ಮೇಯರ್ ಗಂಗಾಂಬಿಕೆ, ಉಪಮೇಯರ್ ಭದ್ರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮತ್ತಿತರರು ಭಾಗವಹಿಸಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin