ಶಾಸಕರ ಅನರ್ಹತೆ ಕುರಿತ ಸುಪ್ರೀಂ ತೀರ್ಪಿಗೆ ಗುಂಡೂರಾವ್ ಮೊದಲ ಪ್ರತಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಯಚೂರು, ನ.13- ಅನರ್ಹ ಶಾಸಕರ ಪ್ರಕರಣದಲ್ಲಿ ವಿಧಾನಸಭಾಧ್ಯಕ್ಷರು ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿರುವುದು ನೈತಿಕತೆ ಗೆಲುವು ಸಿಕ್ಕಂತಾಗಿದೆ. ಶಾಕರನ್ನು ಅನರ್ಹಗೊಳಿಸಿರುವುದು ಸರಿ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಲಿದೆ ಎಂದರು.

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಅಧಿಕಾರದಲ್ಲಿ ಮುಂದುವರೆಯಲು ಬಿಜೆಪಿಗೆ ನೈತಿಕತೆ ಇಲ್ಲ ಎಂದು ಟೀಕಿಸಿರುವ ಅವರು, ಕುದುರೆ ವ್ಯಾಪಾರ ನಡೆಸಿರುವುದು ಸಾಬೀತಾಗಿದ್ದು, ಶೀಘ್ರದಲ್ಲೇ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಲಾಗುವುದು.

ಜತೆಗೆ ಸರ್ಕಾರವನ್ನು ವಜಾಗೊಳಿಸಲು ಒತ್ತಾಯ ಮಾಡಲಾಗುವುದು ಎಂದರು. ಬಿಜೆಪಿಗೆ ನಿಜವಾಗಲು ನೈತಿಕತೆ ಇದ್ದರೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿದ್ದಾರೆ.

Facebook Comments

Sri Raghav

Admin