ಬಿಜೆಪಿ ದ್ವೇಷದ ರಾಜಕಾರಣಕ್ಕೆ ಕಾಂಗ್ರೆಸ್ ಹೆದರಲ್ಲ : ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.21-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ ಆಗಿರುವುದನ್ನು ಖಂಡಿಸುವುದಾಗಿ ಹೇಳಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಇದು ದ್ವೇಷದ ರಾಜಕಾರಣ ಇಂತಹದ್ದಕ್ಕೆಲ್ಲ ಕಾಂಗ್ರೆಸ್ ಹೆದರುವುದಿಲ್ಲ. ಒಟ್ಟಾಗಿ ಪ್ರತಿಭಟಿಸುವ ಮೂಲಕ ಈ ಷಡ್ಯಂತ್ರ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಅವುಗಳನ್ನು ಬಳಕೆ ಮಾಡಿ ಹೆದರಿಸುವ ಪ್ರಯತ್ನ ಮಾಡುತ್ತಿದೆ.

ಮೊದಲಿನಿಂದಲೂ ಈ ರೀತಿಯ ಪ್ರಯತ್ನಗಳನ್ನು ನೋಡುತ್ತಲೇ ಬಂದಿದ್ದೇವೆ. ಇದಕ್ಕೆಲ್ಲ ಹೆದರುವ ಪ್ರಶ್ನೆಯೇ ಇಲ್ಲ ಎಂದರು. ಭ್ರಷ್ಟಾಚಾರ ನಡೆದಿದೆ ಎಂದಾದರೆ ಅದರ ವಿರುದ್ಧ ಕ್ರಮಕೈಗೊಳ್ಳಲು ನಮ್ಮ ಅಭ್ಯಂತರವಿಲ್ಲ. ಆದರೆ ಅದು ನಿಷ್ಪಕ್ಷಪಾತವಾಗಿರಬೇಕು. ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ಖಂಡನೀಯ ಎಂದರು.

Facebook Comments