ಅವೇಶನದಲ್ಲಿ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿ : ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.5- ಬಜೆಟ್ ಅವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕೆ ಹೊರತು ಒಂದು ರಾಷ್ಟ್ರ, ಒಂದು ಚುನಾವಣೆ ಬಗ್ಗೆ ಅಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಸಂಕಷ್ಟದಲ್ಲಿದ್ದಾರೆ. ಬೆಲೆ ಏರಿಕೆಯ ಬೂತದಿಂದ ಜನ ಭೀತಿಗೊಳಗಾಗಿದ್ದಾರೆ. ಈ ಅವೇಶನ ಜನರ ಸಂಕಷ್ಟದ ಬಗ್ಗೆ ಬೆಳಕು ಚೆಲ್ಲಲಿ ಎಂದು ಅವರು ಟ್ವಿಟರ್‍ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ವಿಧಾನಸಭೆಯಲ್ಲಿ ಚರ್ಚಿಸುವಷ್ಟು ಪ್ರಸ್ತುತವಲ್ಲ. ಈ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ಮಾಡುವ ಅಗತ್ಯವಿದ್ದು, ಈ ತಿದ್ದುಪಡಿಯ ಪರಮಾಕಾರವಿರುವುದು ಸಂಸತ್‍ಗೆ ಮಾತ್ರ. ಈ ವಿಚಾರ ಚರ್ಚಿಸುವ ಅಗತ್ಯವೇನಿದೆ. ಇದು ಆರ್‍ಎಸ್‍ಎಸ್ ರಹಸ್ಯ ಕಾರ್ಯಸೂಚಿಯಾಗಿದೆ ಎಂದಿರುವ ಅವರು ಸದನವು ಆರ್‍ಎಸ್‍ಎಸ್ ಅಜ್ಞಾನೂವರ್ತಿಯಲ್ಲ ಎಂದು ಹೇಳಿದ್ದಾರೆ.

Facebook Comments

Sri Raghav

Admin