ಬಿಎಸ್‍ವೈಗೆ ಬಸವಣ್ಣನವರ ತತ್ವಗಳ ಅರಿವಿಲ್ಲ: ಗುಡುಗಿದ ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 15-ಆರ್‍ಎಸ್‍ಎಸ್‍ನಂತಹ ಕೋಮುವಾದಿಗಳ ಜೊತೆಗೆ ಗುರುತಿಸಿಕೊಂಡಿರುವಂತಹ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಸವಣ್ಣ ತತ್ವಗಳ ಬಗ್ಗೆ ಅರಿವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲಿಂಗಾಯತರು ಕಾಂಗ್ರೆಸ್‍ಗೆ ಮತ ಹಾಕಿದರೆ ಅಪರಾಧ ಮಾಡಿದಂತೆ ಎಂದು ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಟ್ವಿಟರ್‍ನಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಎಲ್ಲ ಧರ್ಮವನ್ನು ಸಮಾನವಾಗಿ ಗೌರವಿಸುವುದು ಬಸವ ತತ್ವವಾಗಿದೆ.

ಕೋಮುವಾದಿಗಳ ಜೊತೆಯಲ್ಲಿರುವ ಯಡಿಯೂರಪ್ಪ ಅವರಿಗೆ ಬಸವ ತತ್ವಗಳ ಬಗ್ಗೆ ಅರಿವಿಲ್ಲ. ಹಾಗಾಗಿ ಈ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬಸವಣ್ಣನವರು ನುಡಿದಂತೆ ನಡೆಯುವ ತತ್ವಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.

Facebook Comments