ಖ್ಯಾತ ನಿರ್ದೇಶಕ ದಾಸ್‍ ಗುಪ್ತಾ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ,ಜೂ.10-ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಚಲನಚಿತ್ರ ನಿರ್ದೇಶಕ ಬುದ್ದದೇಬ್ ದಾಸ್‍ಗುಪ್ತಾ ನಿಧನರಾಗಿದ್ದಾರೆ.ವಯೋಸಹಜ ಅನಾರೋಗ್ಯದಿಂದ ನರಳುತ್ತಿದ್ದ 77 ವರ್ಷದ ದಾಸ್‍ಗುಪ್ತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ದಾಸ್‍ಗುಪ್ತಾ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಹನಿಯರು ಕಂಬನಿ ಮಿಡಿದಿದ್ದಾರೆ.

ಬಂಗಾಳಿ ಭಾಷೆಯಲ್ಲಿ ಹಲವಾರು ಚಿತ್ರಗಳನ್ನು ನಿರ್ಮಿಸಿ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದ ದಾಸ್‍ಗುಪ್ತಾ ಅವರ ನಿಧನದಿಂದ ಚಿತ್ರರಂಗಕ್ಕೆ ಭಾರಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Facebook Comments

Sri Raghav

Admin