ಡಿ.ಜಿ.ಹಳ್ಳಿ ಪ್ರಕರಣ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಸರ್ಕಾರ ತೀರ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜಧಾನಿ ಬೆಂಗಳೂರುನ್ನೇ ಬೆಚ್ಚಿ ಬೀಳಿಸಿದ ಡಿ.ಜಿ ಹಳ್ಳಿ ಹಾಗೂ ಕೆ.ಜಿಹಳ್ಳಿ‌ಯ ಕೋಮುಗಲಭೆ ಪ್ರಕರಣವನ್ನು ಜಿಲ್ಲಾ ಮೇಜಿಸ್ಡ್ಯಾಟ್ ಅವರಿಂದ ತನಿಖೆ ನಡೆಸಲು ರಾಜ್ಯ ಸರಕಾರ ತೀರ್ಮಾನ ಕೈಗೊಂಡಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ಅಧಿಕೃತ ಟ್ವಿಟರ್‍ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಸಂಜೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಸದಾನಂದಗೌಡ, ಆರ್.ಅಶೋಕ್, ಡಿಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭಾಗಿಯಾಗಿದ್ದರು, ಯಾವ ರೀತಿ ತನಿಖೆ ನಡೆಸಬೇಕು ಎಂದು ಮಹತ್ವದ ಚರ್ಚೆ ನಡೆಸಲಾಯಿತು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಾಗು ಡಿವಿ ಸದಾನಂದಗೌಡ ಜೊತೆ ಸಭೆ ಸಿಎಂ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡಿದರು, ಎಲ್ಲಾ ಆಯಾಮದಲ್ಲಿ ಚರ್ಚಿಸಲಾಯಿತು.

ಇಡಿ ಪ್ರಕರಣ, ಬೆಂಕಿ ಹಾಕಿದ್ದು ಪುಂಡಾಟ ಮಾಡಿದ್ದು ಎಲ್ಲವನ್ನೂ ಚರ್ಚಿಸಿ, ಅಂತಿಮವಾಗಿ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು ಎಂದರು.

ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಯಾವ ರೀತಿ ತನಿಖೆ ನಡೆಸಬೇಕು ಬೆನ್ನು ಕುರಿತು ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಾರ್ಗಸೂಚಿ ರಚಿಸಿದ್ದು, ಕಾನೂನು ರೀತಿಯಲ್ಲಿಯೇ ತನಿಖೆ ಆಗಲಿ ಎನ್ನುವ ಕಾರಣಕ್ಕೆ ನಾವು ಮಾನವ ಹಕ್ಕು ಆಯೋಗದ ಮಾರ್ಗಸೂಚಿಯಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದ ತನಿಖೆಗೆ ವಹಿಸಲು ನಿರ್ಧರಿಸಲಾಯಿತು ಎಂದರು.

ವಿವಾದಾತ್ಮಕ ಫೇಸ್‌ಬುಕ್‌ ಪೋಸ್ಟ್‌ಗೆ ಸಂಬಂಧಪಟ್ಟಂತೆ ಮಂಗಳವಾರ ರಾತ್ರಿ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಠಾಣೆ ವ್ಯಾಪ್ತಿ ಮತ್ತು ಕಾವಲ್‌ ಭೈರಸಂದ್ರ ಪ್ರದೇಶದಲ್ಲಿ ಗಲಭೆ ಸೃಷ್ಟಿಯಾಗಿತ್ತು.

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪೊಲೀಸ್‌ ಠಾಣೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಸಿಆರ್‌ಪಿಎಫ್‌ ತುಕಡಿ ವಾಹನ ಹಾಗೂ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

ಐಪಿಎಸ್‌ ಅಧಿಕಾರಿಯ ಕಾರು ಕೂಡ ಘಟನೆಯಲ್ಲಿ ಜಖಂ ಆಗಿತ್ತು. ಘಟನೆಯಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ 140ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ.

ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದೂ ಸಿಎಂ ಹೇಳಿದ್ದಾರೆ.

Facebook Comments

Sri Raghav

Admin