ದೀಪಾವಳಿಗೆ ಬೆಂಗಳೂರಿನಿಂದ ಊರಿಗೆ ಹೋಗುವವರಿಗೆ ಇಲ್ಲಿದೆ ಗುಡ್ ನ್ಯೂಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.10- ದೀಪಾವಳಿ ಹಬ್ಬದ ಸಂದರ್ಭ ದಲ್ಲಿ ಸರಣಿ ರಜೆ ಇರುವ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ವತಿಯಿಂದ 1000 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸಿದೆ. ನರಕಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕೆಎಸ್‍ಆರ್‍ಟಿಸಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನ. 13 ಮತ್ತು 14ರಂದು ಬೆಂಗಳೂರಿನಿಂದ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.

ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.16ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೇವೆ ಕಾರ್ಯಾಚರಣೆ ಆರಂಭಿಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಬಸ್ ಸೌಲಭ್ಯ ಕಲ್ಪಿಸಲಾಗಿವುದು. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಅಂದರೆ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ವಿಶೇಷ ಬಸ್ ಸೇವೆಗಳು ಕಾರ್ಯಾಚರಣೆ ಮಾಡಲಿವೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣ ಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್‍ಅಪ್ ಪಾಯಿಂಟ್‍ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕ್ಕಿಂಗ್‍ನ್ನು ಡಿಡಿಡಿ.ho್ಟಠ್ಚಿ.ಜ್ಞಿ ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ 706 ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವÀ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು.

Facebook Comments