ಬೆಳಗಾವಿಯಲ್ಲಿ ಡಿಕೆಶಿಗೆ ತಟ್ಟಿದ ಪ್ರತಿಭಟನೆ ಬಿಸಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ,ಮಾ.29- ನಗರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಇಷ್ಟೆ ಅಲ್ಲದೇ ಡಿ.ಕೆ.ಶಿವಕುಮಾರ್ ಅವರ ಎಸ್ಕಾರ್ಟ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದಾರೆ. ಬಳಿಕ ಪೊಲೀಸರ ಬಿಗಿ ಬಂದೋಬಸ್ತ್‍ನಲ್ಲಿ ಡಿ.ಕೆ.ಶಿವಕುಮಾರ್ ಅವರು ಹೋಟೆಲ್‍ನತ್ತ ತೆರಳಿದರು.

Facebook Comments