ಇಡಿ-ಐಟಿ ಸಮನ್ಸ್ ರದ್ದತಿಗೆ ಡಿಕೆಶಿ ಅರ್ಜಿ, ಆ.28ಕ್ಕೆ ಹೈಕೋರ್ಟ್ ಆದೇಶ ಪ್ರಕಟಿಸುವ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.22-ಇಡಿ- ಮತ್ತು ಐಟಿ ನೀಡಿರುವ ಸಮನ್ಸ್ ಗಳನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್‍ಸಲ್ಲಿಸಿರುವ ಅರ್ಜಿ ಕುರಿತಂತೆ ಹೈಕೋರ್ಟ್ ಆದೇಶವನ್ನು ಆ.28ಕ್ಕೆ ಪ್ರಕಟಿಸುವ ಸಾಧ್ಯತೆ ಇದೆ.

ಕಳೆದ ವರ್ಷ ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ನಿವಾಸ ಸೇರಿದಂತೆ ಅವರ ಬಂಧುಗಳು, ಆಪ್ತರಮನೆಗಳ ಮೇಲೆ ಮತ್ತು ದೆಹಲಿಯಲ್ಲಿ ಡಿಕೆಶಿ ಹೊಂದಿರುವ ಫ್ಲ್ಯಾಟ್‍ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಈ ವೇಳೆ ಕೆಲವು ದಾಖಲೆಪತ್ರಗಳನ್ನು ವಶಪಡಿಸಿಕೊಂಡಿದ್ದರು. ಪ್ರಮುಖವಾಗಿ ಫ್ಲ್ಯಾಟ್‍ನಲ್ಲಿ 8.59ಕೋಟಿ ನಗದು ಪತ್ತೆಯಾಗಿತ್ತು. ಈ ಸಂಬಂಧ ವಿಚಾರಣೆ ನಡೆಯುತ್ತಿತ್ತು.

ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್‍ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‍ಗೆ ಡಿ.ಕೆ.ಶಿವಕುಮಾರ್ ಮನವಿ ಸಲ್ಲಿಸಿದ್ದರು.

Facebook Comments

Sri Raghav

Admin