ಡಿಕೆಶಿ ಅಕ್ರಮವಾಗಿ ಹಣ ಸಂಪಾದಿಸಿಲ್ಲ ಅವರಿಗೆ ರಾಜಕೀಯ ಪ್ರೇರಿತ ಹಿಂಸೆ ನೀಡಲಾಗುತ್ತಿದೆ : ಚಲುವರಾಯಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.11- ಡಿ.ಕೆ.ಶಿವಕುಮಾರ್ ಅವರು ಕಾನೂನು ಬಾಹಿರ ಚಟುವಟಿಕೆಗಳಿಂದ ಹಣ ಸಂಪಾದಿಸಿಲ್ಲ. ಆದರೂ ಕಳೆದ ಎರಡು ವರ್ಷ ಗಳಿಂದ ಇಡಿಯವರು ವಿಚಾರ ಣೆಗೊಳಪಡಿಸಿ ರಾಜಕೀಯ ಪ್ರೇರಿತ ಹಿಂಸೆ ನೀಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪಾದಯಾತ್ರೆ ತೆರಳಲು ಜಮಾಯಿಸಿದ್ದ ಒಕ್ಕಲಿಗರ ಸಂಘಟನೆಗಳ ಒಕ್ಕೂಟ, ವಿಶ್ವ ಒಕ್ಕಲಿಗರ ಮಹಾವೇದಿಕ, ಕರವೇ ಹಾಗೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು
ಉದ್ದೇಶಿಸಿ ಮಾತನಾಡಿದರು.

ಐಟಿ-ಇಡಿ ಸಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉದ್ದೇಶಪೂರ್ವಕವಾಗಿ ರಾಜಕೀಯ ಪ್ರೇರಿತರಾಗಿ ಡಿಕೆಶಿಯವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು. ಡಿ.ಕೆ.ಶಿವಕುಮಾರ್ ಅವರಿಗೆ ನೈತಿಕ ಬೆಂಬಲ ಸೂಚಿಸಲು ನಾವೆಲ್ಲರೂ ಒಂದಾಗಿದ್ದೇವೆ. ಅವರ ಬಂಧನ ರಾಜಕೀಯ ಪ್ರೇರಿತ ನಡೆ. ಇಡಿ ವಿಚಾರಣೆಗಳಿಗೆ ಅವರು ಸಹಕರಿಸಿದರೂ ಅವರಿಗೆ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ವಿಶ್ವ ಒಕ್ಕಲಿಗರ ಮಹಾವೇದಿಕೆ ಅಧ್ಯಕ್ಷ ವೈ.ಡಿ.ರವಿಶಂಕರ್ ಮಾತನಾಡಿ, ಡಿ.ಕೆ.ಶಿವಕುಮಾರ್‍ರವರು ಆರೋಪ ಮುಕ್ತರಾಗುವ ವಿಶ್ವಾಸವಿದೆ ಎಂದರು. ವಿವಿಧ ಒಕ್ಕಲಿಗ ಸಂಘಟನೆಗಳು ಇಂದು ನೈತಿಕ ಬೆಂಬಲ ಸೂಚಿಸಲು ಪಾದಯಾತ್ರೆ ನಡೆಸುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಅವರಿಗೆ ಮಾನಸಿಕ ಕಿರುಕುಳ ನೀಡುವುದನ್ನು ವಿರೋಧಿಸಿ ನಾವು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಶಾಸಕಿ ಸೌಮ್ಯರೆಡ್ಡಿ ಮಾತನಾಡಿ, ಡಿಕೆಶಿ ಅವರ ವಿಚಾರದಲ್ಲಿ ರಾಜಕೀಯ ಸೇಡು ಹಾಗೂ ಹಗೆತನ ಸಾಧಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ, ಮಾಜಿ ಶಾಸಕರಾದ ನರೇಂದ್ರಸ್ವಾಮಿ, ಬಾಲಕೃಷ್ಣ, ಜೆಡಿಎಸ್ ನಗರ ಘಟಕ ಅಧ್ಯಕ್ಷ ಆರ್.ಪ್ರಕಾಶ್, ಕರವೇ ನಾರಾಯಣಗೌಡ ಸೇರಿದಂತೆ ಹಲವಾರು ನಾಯಕರು, ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Facebook Comments