ಡಿಕೆಶಿ ಪತ್ನಿ-ತಾಯಿ ಅರ್ಜಿ ವಿಚಾರಣೆ ನ.4ಕ್ಕೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.30- ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಪ್ರಶ್ನಿಸಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಹಾಗೂ ಪತ್ನಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ದೆಹಲಿ ನ್ಯಾಯಾಲಯ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ.

ಬೆಂಗಳೂರಿನಲ್ಲೇ ವಿಚಾರಣೆ ನಡೆಸಲು ಅವಕಾಶ ನೀಡಬೇಕು ಮತ್ತು ಸಮನ್ಸ್ ರದ್ದುಪಡಿಸಬೇಕೆಂದು ಡಿಕೆಶಿ ತಾಯಿ ಗೌರಮ್ಮ, ಪತ್ನಿ ಉಷಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ, ಇದಕ್ಕೆ ಇಡಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ದೆಹಲಿ ನ್ಯಾಯಾಲಯ ವಿಚಾರಣೆಯನ್ನು ನ.4ಕ್ಕೆ ಮುಂದೂಡಿದೆ.

ಈ ನಡುವೆ ಇಡಿ ಪರ ವಕೀಲರು ಇಂದು ಬೆಳಗ್ಗೆ ಗೌರಮ್ಮ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಇದು ನನ್ನ ಕೈ ಸೇರಿಲ್ಲ ಎಂದು ಗೌರಮ್ಮ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

Facebook Comments