ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡದಿದ್ದರೆ ಉಗ್ರ ಹೋರಾಟ : ಸಿಎಂಗೆ ಡಿಕೆಶಿ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.7-ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ರದ್ದು ಮಾಡಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯದಿದ್ದರೆ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಕನಕಪುರಕ್ಕೆ 2018-19ನೇ ಸಾಲಿನ ಬಜೆಟ್‍ನಲ್ಲಿ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡಲಾಗಿತ್ತು. ಸಂಪುಟ ಸೇರಿದಂತೆ ಎಲ್ಲಾ ಹಂತದಲ್ಲೂ ಅನುಮತಿ ಸಿಕ್ಕ ಬಳಿಕವೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕನಕಪುರ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ನೀಡಲು ನನ್ನ ವಿರೋಧವಿಲ್ಲ. ಆದರೆ ಕನಕಪುರಕ್ಕೆ ನೀಡಿರುವ ಕಾಲೇಜನ್ನು ರದ್ದು ಮಾಡಿರುವುದು ಸರಿಯಲ್ಲ. ಕೂಡಲೇ ತಮ್ಮ ನಿರ್ಧಾರವನ್ನು ಹಿಂಪಡೆಯಬೇಕು, ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜಿನ ಕಾಮಗಾರಿ ಆರಂಭಿಸಲು ಗುದ್ದಲಿ ಪೂಜೆ ನಡೆಸಲು ಸಮಯ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ.

Facebook Comments