ಐಟಿ ದಾಳಿ ಪ್ರಕರಣ : ಕೋರ್ಟ್‍ಗೆ ಹಾಜರಾದ ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.10- ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರ ಅರ್ಜಿ ವಿಚಾರಣೆಯನ್ನು ಡಿ.20ಕ್ಕೆ ಮುಂದೂಡಿದೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಐಟಿ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಇಂದು ಹಾಜರಾಗಿದ್ದರು.

ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯ ಸಾಕ್ಷಿಗಳ ವಿಚಾರಣೆ ನಡೆಸಿತು. ಐಟಿ ಅಧಿಕಾರಿಗಳು ದಾಖಲಿಸಿರುವ ಪ್ರಕರಣವನ್ನು ಕೈಬಿಡುವಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಆರಂಭಿಸಿದೆ.

ಡಿ.ಕೆ.ಶಿವಕುಮಾರ್ ಮತ್ತು ಇತರರ ಪರ ವಕೀಲರು ವಿಚಾರಣೆಗೆ ಒಂದು ತಿಂಗಳ ಕಾಲಾವಕಾಶ ಕೊಡಬೇಕೆಂದು ಮಾಡಿದ ಮನವಿಗೆ ನ್ಯಾಯಾಧೀಶರು ಗರಂ ಆದರು.  ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮುಂದಿನ ವಾರ ವಿಚಾರಣೆ ಇದೆ. ಹೀಗಾಗಿ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಡಿ.20ಕ್ಕೆ ವಿಚಾರಣೆಯನ್ನು ಮುಂದೂಡಿತು.

Facebook Comments