ಮುಂದಿನ ದಿನಗಳಲ್ಲಿ ಯುವಕರಿಗೆ ಆದ್ಯತೆ : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.18- ಮೇಲ್ಮನೆ ಎಂದು ಹಿರಿಯರನ್ನು ಆಯ್ಕೆ ಮಾಡಲಾಗಿದೆ. ಮುಂಬರುವ ವಿಧಾನಸಭೆಗೆ ಯುವ ಮುಖಗಳಿಗೆ ಅವಕಾಶ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಸ್ಥಾನಗಳಿಗೆ ಪಕ್ಷದ ವತಿಯಿಂದ 200ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ನಾವು ಚರ್ಚೆ ಮಾಡಿ ಮೂರ್ನಾಲ್ಕು ಸಮುದಾಯಗಳನ್ನು ಪರಿಗಣಿಸಿದ್ದೆವು. ಒಬ್ಬ ಹಿರಿಯ ನಾಯಕರಿಗೆ ಪಕ್ಷ ಟಿಕೆಟ್ ನೀಡಿದೆ ಎಂದರು.

ನಮ್ಮ ಸಲಹೆ ಪರಿಗಣಿಸಿ ಹೈಕಮಾಂಡ್ ಆಯ್ಕೆ ಮಾಡಿದೆ. ಹರಿಪ್ರಸಾದ್ ನನಗಿಂತ ಹಿರಿಯರು. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯುವ ಮುಖಗಳಿಗೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದರು.  ಅಪ್ಪರ್ ಹೌಸ್ ಅಂತ ಹಿರಿಯರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಯುವಕರಿಗೆ ಅವಕಾಶ ಸಿಗಲಿದೆ ಎಂದು ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಮೇಲ್ಮನೆಗೆ ಸುಮಾರು 200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಎಲ್ಲವನ್ನೂ ಹೈಕಮಾಂಡ್‍ಗೆ ಕಳುಹಿಸಿದ್ದೆವು. ಹೈಕಮಾಂಡ್ ಅಂತಿಮವಾಗಿ ಇಬ್ಬರನ್ನು ಆಯ್ಕೆ ಮಾಡಿದೆ. ನಜೀರ್ ಅಹಮ್ಮದ್, ಹರಿಪ್ರಸಾದ್ ಒಮ್ಮತದ ಅಭ್ಯರ್ಥಿಗಳಾಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Facebook Comments