ಮಹಿಳೆಯರಲ್ಲಿ ರಾಜಕೀಯ ಪ್ರಜ್ಞೆ ಬೆಳೆದರೆ ಸಮಾಜಕ್ಕೆ ಒಳಿತು : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.27- ಮಹಿಳೆ ಯರಿಗೆ ರಾಜಕೀಯ ಪ್ರಜ್ಞಾ ಬೆಳೆದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಆರ್.ಆರ್.ನಗರ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಲು ನಾಗರಬಾವಿಯಲ್ಲಿ ನಿನ್ನೆ ಸಂಜೆ ನಡೆದ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ವಾಸವಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಮೂಲ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಹೆಣ್ಣು ಕುಟುಂಬದ ಕಣ್ಣು ಅಂತಾ ನಂಬುತ್ತೇವೆ.

ನಮ್ಮ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಬೊಮ್ಮನಹಳ್ಳಿ, ರಾಜಾಜಿನಗರ ಹಾಗೂ ಜಯನಗರ ಒಟ್ಟು 3 ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ನೀಡಿದ್ದೇವೆ. ಬಿಜೆಪಿ ಯವರು 28 ಕ್ಷೇತ್ರದಲ್ಲಿ ಒಂದೂ ಕೊಟ್ಟಿಲ್ಲ ಎಂದು ಹೇಳಿದರು. ಬೆಂಗಳೂರಿನಲ್ಲಿ ಮಹಿಳೆಯರ ಪ್ರಮಾಣ ಶೇ. 52ರಷ್ಟಿದೆ. ಭವಿಷ್ಯದ ರಾಜಕೀಯದಲ್ಲಿ ಪ್ರಜ್ಞಾವಂತ ಹೆಣ್ಣು ಮಕ್ಕಳಿರಬೇಕು. ಅವರ ನೋವುಗಳನ್ನು ಹೇಳಿಕೊಳ್ಳಲು ಹೆಣ್ಣುಮಕ್ಕಳು ಇರಬೇಕು. ಹೀಗಾಗಿ ಬುದ್ಧಿವಂತ, ಪ್ರಜ್ಞಾವಂತ, ಸ್ವಾಭಿಮಾನಿ ಹೆಣ್ಣನ್ನು ಆರ್.ಆರ್. ನಗರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ.

ಈ ಕ್ಷೇತ್ರದ ಜನ ಹಾಗೂ ಮಹಿಳೆಯರು ಪಕ್ಷಬೇಧ ಜಾತಿ-ಧರ್ಮ ಬೇಧ ಬಿಟ್ಟು ಕುಸುಮಾ ಅವರನ್ನು ಗೆಲ್ಲಿಸು ತ್ತಾರೆಂಬ ನಂಬಿಕೆ ಇದೆ. ಕ್ಷೇತ್ರದಲ್ಲಿ ಎಲ್ಲ ಕಾರ್ಯಕರ್ತರು ಕುಸುಮಾ ಅವರ ಪರ ಕೆಲಸ ಮಾಡುತ್ತಿದ್ದಾರೆ. ನೀವು ನಿಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಹಾಗೂ ಅಕ್ಕ ಪಕ್ಕದವರ ಜತೆ ಮಾತನಾಡಿ ಕುಸುಮಾ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಆರ್ಥಿಕ ವ್ಯವಸ್ಥೆ, ಉದ್ಯೋಗ, ಮಹಿಳೆಯರು, ರೈತರ ವಿಚಾರ ವಾಗಿ ಬಿಜೆಪಿ ಸರ್ಕಾರ ಏನು ಭರವಸೆ ಕೊಟ್ಟಿತ್ತು. ಆದರೆ ಏನು ಮಾಡಿದೆ ಎಂಬುದರ ಬಗ್ಗೆ ಮಾತನಾಡುವುದು ಸಾಕಷ್ಟಿದೆ. ಇದೆಲ್ಲ ನಿಮಗೇ ಅನುಭವವಾಗಿದೆ. ಈ ಸರ್ಕಾರದಿಂದ ಜನಕ್ಕೆ ಪ್ರಯೋ ಜನ ಆಗಿಲ್ಲವೆಂಬ ಸಂದೇಶ ಕೊಡಬೇಕಿದೆ. ಅದಕ್ಕಾಗಿ ಈ ಚುನಾವಣೆಯಲ್ಲಿ ಕುಸುಮಾ ಅವರನ್ನು ಗೆಲ್ಲಿಸಬೇಕಿದೆ ಎಂದು ಕರೆ ನೀಡಿದರು.

Facebook Comments