ಬೆಂಗಳೂರು ಗಲಭೆ ಪ್ರಕರಣದಲ್ಲಿ ಬಂಧಿತ ಜಾಕೀರ್ ಬಗ್ಗೆ ಪ್ರತಿಕ್ರಿಯಿಸಲು ಡಿಕೆಶಿ ನಿರಾಕರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.4- ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತನಾಗಿರುವ ಬಿಬಿಎಂಪಿಯ ಮಾಜಿ ಕಾಪೋರೆಟರ್ ಜಾಕೀರ್ ಬಗ್ಗೆ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಾಕರಿಸಿದ್ದಾರೆ.  ಬೆಂಗಳೂರಿನ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಕೀರ್ ಬಂಧನವಾಗಿರುವ ಬಗ್ಗೆ ಪತ್ರಿಕೆಗಳಲ್ಲಿ ನೋಡಿದ್ದೇನೆ. ಹೆಚ್ಚಿನ ಮಾಹಿತಿ ಪಡೆದುಕೊಂಡ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

ಈ ಮೊದಲು ಇನ್ನೊಬ್ಬ ಆರೋಪಿಯಾಗಿರುವ ಸಂಪತ್ ರಾಜ್ ಬಂಧನದ ವೇಳೆ ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರು, ಗಲಭೆ ಪ್ರಕರಣದಲ್ಲಿ ಕಾಂಗ್ರೆಸಿಗರನ್ನು ಸಿಲುಕಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ. ಪೊಲೀಸರ ಮೇಲೆ ಒತ್ತಡ ಹೇರಿ ಮಾಜಿ ಕಾಪೆರ್ರೆಪೋಟರ್‍ಗಳನ್ನು ಆರೋಪ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ದೂರುತ್ತಿದ್ದರು.

ಗಲಭೆ ಪ್ರಕರಣದಲ್ಲಿ ಸರ್ಕಾರದ ಲೋಪವಿದೆ, ಅದನ್ನು ಮರೆ ಮಾಚಲು ಕಾಂಗ್ರೆಸ್ ನಾಯಕರನ್ನು ಸಿಲುಕಿಸುವ ಪ್ರಯತ್ನ ನಡೆಸಲಾಗುತ್ತಿದೆ. ಗಲಭೆಯಲ್ಲಿ ಕಾಂಗ್ರೆಸ್‍ನ ಯಾರು ಭಾಗಿಯಾಗಿಲ್ಲ ಎಂದು ವಾದಿಸುತ್ತಿದ್ದರು. ಇದು ಪಕ್ಷದಲ್ಲಿ ವಿರೋಧಕ್ಕೂ ಕಾರಣವಾಗಿತ್ತು. ಇದೇ ಮೊದಲ ಬಾರಿಗೆ ಜಾಕಿರ್ ಬಂಧನವಾದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಜೊತೆಗೆ ಗ್ರಾಮ ಪಂಚಾಯತ್ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಸಿದ್ದವಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡಬೇಕಲ್ಲ. ನಮ್ಮ ಸಿದ್ಧಾಂತ ಆಧರಿಸಿ ಸಂಘಟನೆ ಮಾಡಬೇಕು, ಚುನಾವಣೆ ಎದುರಿಸಬೇಕು. ಹಾಗಾಗಿ ಚುನಾವಣೆಗಳು ನಡೆಯಬೇಕು. ಗ್ರಾಮ ಪಂಚಾಯತ್‍ಗೆ ಚುನಾವಣೆ ನಡೆಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ನಾವು ಹೈಕೋರ್ಟ್ ಮೊರೆ ಹೋಗಿದ್ದವು. ನ್ಯಾಯಾಲಯದ ತೀರ್ಪಿನಂತೆ ಚುನಾವಣೆ ಘೋಷಣೆಯಾಗಿದೆ.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಚಿನ್ನೆ ಇಲ್ಲದೆ ಇದ್ದರೂ ನಮ್ಮ ಕಾರ್ಯಕರ್ತರಿಗೆ ಯವ ರೀತಿ ಸೂಚನೆ ನೀಡಬೇಕೋ ಆ ಸೂಚನೆಯನ್ನು ನಾವು ನೀಡುತ್ತೇವೆ ಎಂದು ಹೇಳಿದರು. ಡಿಸೆಂಬರ್ 5ರಂದು ಕರ್ನಾಟಕ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸುರ್ಜೇವಾಲ ಅವರ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸಿ ಸೂಚನೆ ನೀಡಲಿದ್ದಾರೆ ಎಂದು ಹೇಳಿದರು.

Facebook Comments