ಮತ್ತೆ ಆಸ್ಪತ್ರೆಗೆ ದಾಖಲಾದ ಡಿಕೆಶಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.4- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿ ಪ್ರವಾಸ ಮುಗಿಸಿ ಬಂದಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಆಗಸ್ಟ್ 25ರಂದು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ರಾಜಾಜೀನಗರದ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸಣ್ಣ ಪ್ರಮಾಣದ ಜ್ವರ, ನೆಗಡಿ ಹೊರತು ಪಡಿಸಿದರೆ ಕೊರೊನಾ ಕಾಡುವ ಬೇರೆ ಯಾವ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಆಗಸ್ಟ್‍ 31ರವರೆಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು.

ಇನ್ನು ಒಂದು ವಾರ ಕಾಲ ಚಿಕಿತ್ಸೆ ಮುಂದುವರೆಸುವಂತೆ ವೈದ್ಯರು ಸಲಹೆ ಮಾಡಿದರು. ಆಸ್ಪತ್ರೆ ಬಳಿ ಬರುವ ಕಾರ್ಯಕರ್ತರ, ನಾಯಕರನ್ನು ನಿಯಂತ್ರಿಸುವುದು ಕಷ್ಟವಾಗಿದ್ದರಿಂದ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್‍ಚಾರ್ಜ್‍ ಆಗಿದ್ದರು.

ಮನೆಎ ಬರುತ್ತಿದ್ದಂತೆ ಮತ್ತೆ ತೀವ್ರ ಸ್ವರೂಪದ ಜ್ವರ ಕಾಣಿಸಿಕೊಂಡಿದೆ. ಹಾಗಾಗಿ ತಡ ಮಾಡದರೆ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಟ ಇನ್ನೂ ಒಂದು ವಾರ ಕಾಲ ವಿಶ್ರಾಂತಿ ಮತ್ತು ಚಿಕಿತ್ಸೆಯ ಅಗತ್ಯ ಇರುವುದರಿಂದ ಕಾರ್ಯಕರ್ತರು ಮತ್ತು ನಾಯಕರು ಆಸ್ಪತ್ರೆಯ ಬಳಿ ಬರಬಾರದು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಡಿ.ಕೆ.ಶಿವಕುಮಾರ್ ಚೇತರಿಸಿಕೊಳ್ಳುತ್ತಿದ್ದಾರೆ. ಜ್ವರ ಕಡಿಮೆಯಾಗುತ್ತಿದೆ ಎಂದು ಹೇಳಲಾಗಿದೆ.

Facebook Comments

Sri Raghav

Admin