ಕಾಂಗ್ರೆಸ್‍ನ ಹಿರಿಯ ನಾಯಕರನ್ನು ಭೇಟಿಯಾದ ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.30- ಎರಡು ದಿನಗಳ ಪ್ರವಾಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಕಾಂಗ್ರೆಸ್‍ನ ಹಿರಿಯ ನಾಯಕರಾದ ಜನಾರ್ದನ ಪೂಜಾರಿ ಮತ್ತು ಆಸ್ಕರ್ ಫರ್ನಾಂಡಿಸ್‍ರನ್ನು ಭೇಟಿ ಮಾಡಿ ಸಮಾಲೋಚಿಸಿದರು.

ಆಸ್ಕರ್ ಫರ್ನಾಂಡಿಸ್ ಅವರು ಆರೋಗ್ಯ ಸಮಸ್ಯೆಯಿಂದ ವಿಶ್ರಾಂತಿಯಲ್ಲಿದ್ದರೆ, ಜನಾರ್ದನ ಪೂಜಾರಿ ಅವರು ಕಾಂಗ್ರೆಸ್‍ನಲ್ಲಿನ ಬೆಳವಣಿಗೆಗಳಿಂದ ಬೇಸತ್ತು ತಟಸ್ಥರಾಗಿದ್ದರು.

ಜೊತೆಗೆ ಮಂಗಳೂರಿನ ಬಿಷಪ್ ಮೋ.ರೆ.ಡಾ.ಪೀಟರ್ ಪೌಲ್ ಸಲ್ಡಾನರನ್ನು ಭೇಟಿ ಮಾಡಿದರು. ನಂತರ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಈ ಸಂದರ್ಭದಲ್ಲಿ ಜೊತೆಯಲ್ಲಿದ್ದರು.

Facebook Comments

Sri Raghav

Admin