ಮುಸ್ಲಿಂ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.20- ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು.

ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು ಜಮೀರ್ ಅಲ್ಲೇ ಇರಬೇಕು ಎಂಬ ಕಾರಣಕ್ಕಾಗಿ ಸದ್ಯಕ್ಕೆ ಸಭೆಗೆ ಬರುವುದು ಬೇಡ ಎಂದು ನಾನೇ ಸಲಹೆ ನೀಡಿದ್ದೆ. ಹಾಗಾಗಿ ಜಮೀರ್ ಸಭೆಗೆ ಬಂದಿಲ್ಲ ಎಂದರು.

ಸದ್ಯಕ್ಕೆ ಕೆಲ ವಿಷಯಗಳನ್ನು ಚರ್ಚೆ ಮಾಡಿದ್ದೇವೆ. ಸಭೆ ಮತ್ತೆ ಮುಂದುವರೆಯಲಿದೆ ಎಂದು ಸ್ಪಷ್ಟ ಪಡಿಸಿದರು. ಸಭೆಯಲ್ಲಿ ಮುಸ್ಲಿಂ ಸಮುದಾಯ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗದೆ ಸರ್ಕಾರದ ಜೊತೆ ಸಹಕರಿಸಲು ಮುಖಂಡರು ಮನವೋಲಿಕೆ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಕೇಂದ್ರದ ಮಾಜಿ ಸಚಿವರಾದ ಸಿಎಂ ಇಬ್ರಾಹಿಂ, ರೆಹಮಾನ್ ಖಾನ್, ಶಾಸಕರಾದ ಎನ್ ಎ ಹ್ಯಾರಿಸ್, ರಿಜ್ವಾನ್ ಹರ್ಷದ್, ಹಸನಬ್ಬ, ವಿಧಾನ ಪರಿಷತ್ ಸದಸ್ಯ ನಜೀರ್, ಜಿ.ಎ ಬಾವಾ, ಶಫೀವುಲ್ಲಾ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಯೀದ್ ಅಹಮದ್ ಮತ್ತಿತರ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

Facebook Comments

Sri Raghav

Admin