ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಡಿಕೆಶಿ ಆಕ್ರೋಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.10- ಕೊರೊನಾ ಸಂದರ್ಭದಲ್ಲಿ ಜೀವ ಉಳಿಯಬೇಕೆಂದು ಎಲ್ಲರೂ ಸರ್ಕಾರದ ಜೊತೆ ಕೈಜೋಡಿಸಿದ್ದರು, ಆದರೆ ಸರ್ಕಾರ ಯಾವುದೇ ಚರ್ಚೆ ಮಾಡದೆ ಏಕಾಏಕಿ ಜನವಿರೋ ಕಾನೂನುಗಳನ್ನು ಜಾರಿಗೊಳಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಭಾರತ ಉಳಿಸಿ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶ ರಕ್ಷಣೆಗೆ ಎಲ್ಲಾ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಸೇರಿರುವುದು ಸಂತೋಷದ ವಿಷಯ, ರೈತ, ಕಾರ್ಮಿಕ ಸಂಘಟನೆಗಳು ಹೋರಾಟಕ್ಕೆ ಇಳಿದಿವೆ ಇದು ಸ್ವಾಗತಾರ್ಹ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಸರ್ಕಾರದೊಂದಿಗೆ ಪ್ರತಿಪಕ್ಷಗಳು, ಜನಸಾಮಾನ್ಯರು ಒಳ್ಳೆಯ ಸಹಕಾರ ನೀಡಿದ್ದಾರೆ ಅದಕ್ಕೆ ಪ್ರತಿಯಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ಕಾನೂನು, ಎಪಿಎಂಸಿ ಕಾನೂನು, ಭೂಸುಧಾರಣಾ ಕಾನೂನುಗಳನ್ನು ಜಾರಿಗೆ ತಂದು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಿತ್ತು, ರಾಜ್ಯ ಸರ್ಕಾರ 1610 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತು ಆದರೆ ಇವ್ಯಾವುದೂ ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳಿಗೆ ತಲುಪಿಲ್ಲ, ಶೇ. 10ರಷ್ಟು ಜನರಿಗೆ ಮಾತ್ರ ಆರ್ಥಿಕ ನೆರವು ನೀಡಿ ಉಳಿದವರನ್ನು ವಂಚಿಸಲಾಗುತ್ತಿದೆ.

ಕೈಗಾರಿಕೆಗಳು ಮುಚ್ಚಿ ಹೋಗುತ್ತಿವೆ, ನಿರುದ್ಯೋಗಗಳು ಹೆಚ್ಚಾಗುತ್ತಿದೆ, ಆರ್ಥಿಕ ಕುಸಿತದಿಂದಾಗಿ ಜೀವನ ನಡೆಸುವುದೇ ಕಷ್ಟವಾಗುತ್ತಿದೆ, ಈ ಸಂದರ್ಭದಲ್ಲಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿರುವುದು ಜನವಿರೋ ನಿಲುವೆಂದು ಆರೋಪಿಸಿದರು.

ಸರ್ಕಾರ ಜನಸಾಮಾನ್ಯರ ಬಗ್ಗೆ ಗಮನ ಹರಿಸುತ್ತಿಲ್ಲ ಬಂಡವಾಳ ಶಾಹಿಗಳಿಗೆ ಮಣೆ ಹಾಕುತ್ತಿದೆ ಎಂದು ಡಿಕೆಶಿ ಕಿಡಿಕಾರಿದರು.

Facebook Comments

Sri Raghav

Admin