“ಹೆದರಿಸಿದರೆ ಹೆದರಲ್ಲ, ನಾವು ಕೈಕಟ್ಟಿ ಕೂರಲ್ಲ” : ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.15- ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‍ನ ಪಾಲಿಕೆ ಸದಸ್ಯರಿಗೆ ನೋಟಿಸ್ ನೀಡಿ ಬೆದರಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ನೋಡಿಕೊಂಡು ನಾವು ಕೈ ಕಟ್ಟಿ ಕೂರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಸಿದ್ದಾರೆ.

ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆಯಲ್ಲಿ ತೊಂದರೆಗೆ ಒಳಗಾದ ನಮ್ಮ ಪಕ್ಷದ ಶಾಸಕರಾದ ಅಖಂಡ ಶ್ರೀನಿವಾಸ್ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯಲಾಗುತ್ತಿದೆ.

ನಮಗೆ ಎಲ್ಲವೂ ಗೋತ್ತಿದೆ. ಬಿಜೆಪಿಯ ಒಳ ಜಗಳದಿಂದ ಈ ಘಟನೆ ನಡೆದಿದೆ. ಬಿಜೆಪಿ ಸರ್ಕಾರದ ವೈಪಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಘಟನೆಯ ಸತ್ಯ ಶೋಧನೆಗೆ ಮೂರು ಮಂದಿ ಮಾಜಿ ಗೃಹ ಸಚಿವರ ಸಮಿತಿಯನ್ನು ಕಾಂಗ್ರೆಸ್ ರಚಿಸಿದೆ.

ವರದಿ ಬಂದ ಮೇಲೆ ಸತ್ಯಾಂಶ ತಿಳಿಯಲಿದೆ ಎಂದು ಹೇಳಿದರು. ಗುಂಪು ಗಲಭೆಗೆ ಸರ್ಕಾರ ವೈಪಲ್ಯವೇ ನೇರ ಕಾರಣ. ಮೂರು ಗಂಟೆಯವರೆಗೂ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಅವಕಾಶಗಳಿದ್ದವು ಯಾಕೆ ಎಚ್ಚೇತ್ತುಕೊಳ್ಳಲಿಲ್ಲ ಎಂದು ಪ್ರಶ್ನಿಸಿದ್ದರು.

ಘಟನೆ ನಡೆದಿರುವುದಾದರೂ ಹೇಗೆ ? ಬಿಜೆಪಿಯ ಬೆಂಬಲಿಗನ ಟ್ವಿಟ್‍ನಿಂದ ಅಶಾಂತಿಯ ವಾತಾವರಣ ಸೃಷ್ಠಿಯಾಗಿದೆ. ತಕ್ಷಣ ದೂರು ದಾಖಲಿಸಿ ಕ್ರಮ ಕೈಗೊಂಡಿದ್ದರೆ ಗಲಭೆಯೇ ಆಗುತ್ತಿರಲಿಲ್ಲ. ಘಟನೆಯಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ಹೇಳಿಕೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ.

ಘಟನೆಯ ತನಿಖೆ ನಡೆಯುವಾಗ ಗೃಹ ಸಚಿವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡಲು ಯಾವ ಅಕಾರ ಹೊಂದಿದ್ದಾರೆ. ಅವರೇನು ತನಿಖಾಕಾರಿಯೇ, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಅಥವಾ ಪೆÇಲೀಸ್ ಆಯುಕ್ತರೆ, ತನಿಖಾ ಆಯೋಗದ ಸದಸ್ಯರೇ ಎಂದು ಪ್ರಶ್ನಿಸಿದರು.

ಘಟನೆಯಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ. ಅದನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡಲಾಗುತ್ತಿದೆ. ನಮ್ಮ ಪಕ್ಷದ ಬಿಬಿಎಂಪಿ ಸದಸ್ಯರಿಗೆ ನೋಟಿಸ್ ನೀಡಿ ಬೆದರಿಸಿ ಬ್ಲಾಕ್ ಮೇಲ್ ಮಾಡುವ ಪ್ರಯತ್ನ ನಡೆಯುತ್ತಿದೆ. ಜಾತಿ ಬಣ್ಣ ಬಳಿಯಲಾಗುತ್ತಿದೆ ಎಂದು ಕಿಡಿಕಾರಿದರು.

ಅಖಂಡ ಶ್ರೀನಿವಾಸ್ ನಮ್ಮ ಪಕ್ಷದ ಹಿರಿಯ ನಾಯಕರು, ಎರಡು ಬಾರಿ ಶಾಸಕರಾಗಿದ್ದಾರೆ. ಅವರ ರಕ್ಷಣೆಗೆ ನಮ್ಮ ಪಕ್ಷ ಬೆಂಬಲವಾಗಿ ನಿಂತಿದೆ. ಕರ್ನಾಟಕ ಮಾತ್ರವಲ್ಲ, ಅಖಿಲ ಭಾರತ ಮಟ್ಟದಲ್ಲೂ ಕಾಂಗ್ರೆಸ್ ನಾಯಕರು ಅಖಂಡ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ನಾಯಕರು ತಮ್ಮ ವೈಪಲ್ಯ ಮುಚ್ಚಿಕೊಳ್ಳಲು ಅಖಂಡ ಅವರ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯುತ್ತಿದ್ದಾರೆ. ನಮ್ಮ ಪಕ್ಷದ ಶಾಸಕರು ರಕ್ಷಣೆ ನಮಗೆ ಗೋತ್ತಿದೆ. ಇದರಲ್ಲಿ ಬಿಜೆಪಿ ಕೈ ಆಡಿಸುವ ಅಗತ್ಯ ಇಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿ ಅಕಾರಕ್ಕೆ ಬಂದಾಗಲೆಲ್ಲಾ ಕೋಮುಗಲಭೆಗಳಾಗುತ್ತವೆ. ಶಾಂತಿ ಭಂಗವಾಗುವ ಘಟನೆಗಳು ನಡೆಯುತ್ತವೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತನೊಬ್ಬ ಶಂಕರಾಚಾರ್ಯರ ಪ್ರತಿಮೆ ಮೇಲೆ ಅನ್ಯಧರ್ಮದ ಬ್ಯಾನರ್ ಹೊದಿಸಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದ. ಆ ಪ್ರಕರಣವನ್ನು ಅಲ್ಪಸಂಖ್ಯಾತರ ತಲೆಗೆ ಕಟ್ಟುವ ಪ್ರಯತ್ನ ನಡೆದಿತ್ತು. ಸತ್ಯಾಂಶ ಬಯಲಾದ ಮೇಲೆ ಘಟನೆಯನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.

Facebook Comments

Sri Raghav

Admin