ಗೌಡರ ಆಶೀರ್ವಾದ ಪಡೆದ ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ನ.8- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದರು.ಚಾಮುಂಡಿ ಬೆಟ್ಟಕ್ಕೆ ಶಿವಕುಮಾರ್ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿ ವಾಪಸಾಗುತ್ತಿದ್ದಾಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೂ ದೇಗುಲ ಪ್ರವೇಶಿಸುತ್ತಿದ್ದರು.

ದೊಡ್ಡಗೌಡರನ್ನು ಕಂಡ ಕೂಡಲೇ ಡಿ.ಕೆ.ಶಿವಕುಮಾರ್ ಬಂದು ಗೌಡರ ಕಾಲಿಗೆರಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಗೌಡರು ಡಿ.ಕೆ.ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿ ಸ್ವಲ್ಪ ದೂರ ಮಾತನಾಡುತ್ತಾ ನಡೆದರು. ಈ ಸಂದರ್ಭದಲ್ಲಿ ದೇವೇಗೌಡರೊಂದಿಗೆ ಪತ್ನಿ ಚೆನ್ನಮ್ಮ ದೇವೇಗೌಡರು ಸಹ ಇದ್ದರು.

 

Facebook Comments

Sri Raghav

Admin