ಬಿಜೆಪಿಯವರು ಹಣ ಹಂಚುವ ವಿಡಿಯೋ ಸೆರೆ ಹಿಡಿಯಲು ಡಿಕೆಶಿ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾನಗಲ್, ಅ.23- ಉಪಚುನಾವಣಾ ಕಣದಲ್ಲಿ ಬಿಜೆಪಿಯವರು ಹಣ ಹಂಚುವುದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಪೆÇೀಸ್ಟ್ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.ಹಾನಗಲ್ ಉಪಚುನಾವಣಾ ಕಣದಲ್ಲಿ ಪ್ರಚಾರ ನಡೆಸಿದ ಅವರು ಮಾರ್ಗ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ ಕ್ಷೇತ್ರದಲ್ಲೇ ಠಿಕಾಣಿ ಹೂಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು.

ಎಲ್ಲಿಯೂ ರೈತರ ಆದಾಯ ದ್ವಿಗುಣವಾಗಿಲ್ಲ. ನಾನು ಪ್ರಚಾರ ಮಾಡಿದ ಕಡೆಯಲೆಲ್ಲಾ ರೈತರೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದೇನೆ. ಎಲ್ಲಿಯೂ ಆದಾಯ ಹೆಚ್ಚಾಗಿಲ್ಲ. ಬದಲಾಗಿ ಕೃಷಿಕರ ಬದುಕು ಕಷ್ಟಕ್ಕೆ ಸಿಲುಕಿದೆ. ರಸಗೊಬ್ಬರದ ಬೆಲೆ ಹೆಚ್ಚಾಗಿದೆ.

ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಹೀಗಾಗಿ ಬಿಜೆಪಿ ಹಣ ಕೊಟ್ಟು ಮತ ಪಡೆಯುವ ಪ್ರಯತ್ನ ಮಾಡುತ್ತಿದೆ. ಜನ ಬುದ್ಧಿವಂತರಿದ್ದಾರೆ. ಇವರ ಆಮಿಷಗಳಿಗೆ ಮರಳಾಗುವುದಿಲ್ಲ ಎಂದು ಹೇಳಿದರು.ಬಿಜೆಪಿಯವರು ಹಣ ಹಂಚುವುದನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು ಪೆÇೀಸ್ಟ್ ಮಾಡುವಂತೆ ತಮ್ಮೆಲ್ಲಾ ಕಾರ್ಯಕರ್ತರಿಗೆ ಕರೆ ನೀಡುತ್ತಿದ್ದೇನೆ.

ಈ ಮೊದಲಿನ ಚುನಾವಣೆಯಲ್ಲೂ ಹಣ ಹಂಚುವ ಹಲವಾರು ವಿಡಿಯೋಗಳನ್ನು ನಮ್ಮ ಕಾರ್ಯಕರ್ತರು ಪೋಸ್ಟ್ ಮಾಡಿದ್ದರು. ಆದರೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಹೇಳಿದರು.
ಕೊರೊನಾ ಬಳಿಕ ಜನ ಜೀವನ ಸಂಕಷ್ಟಕ್ಕೆ ಸಿಲುಕಿದೆ.

ಆದಾಯ ಕುಸಿತವಾಗಗಿದೆ. ಸರ್ಕಾರ ಅವರ ನೇರವಿಗೆ ಬಂದಿಲ್ಲ. ಸರ್ಕಾರ ಘೋಷಿತ ಭರವಸೆಗಳನ್ನು ಈಡೇರಿಸಿಲ್ಲ ಎಂದು ಅವರ ಆಕ್ಷೇಪಿಸಿದರು.

Facebook Comments

Sri Raghav

Admin