ರೇಷ್ಮೆಗೂಡಿಗೆ ಬೆಂಬಲ ಬೆಲೆ ನಿಗದಿಪಡಿಸಲು ಡಿ.ಕೆ.ಸುರೇಶ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಸೆ.21- ದೇಶದ ರೇಷ್ಮೆ ಬೆಳೆಗಾರರು ನ್ಯಾಯಯುತ ಬೆಲೆ ಸಿಗದೆ ಕಂಗಾಲಾಗಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ. ಇವರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿ ರೇಷ್ಮೆಗೂಡಿಗೆ ಬೆಂಬಲ ಬೆಲೆ ಪ್ರಕಟಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲೋಕಸಭೆ ಅಧಿವೇಶನದಲ್ಲಿ ನಿಯಮ 377 ಅಡಿಯಲ್ಲಿ ಲಿಖಿತ ರೂಪದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿರುವ ಡಿ.ಕೆ ಸುರೇಶ್ ದೇಶದಲ್ಲಿ ರೇಷ್ಮೆ ವ್ಯವಸಾಯವು ಲಕ್ಷಾಂತರ ಕೃಷಿಕರ ಪ್ರಮುಖ ಆದಾಯ ಮೂಲವಾಗಿದೆ. ರೇಷ್ಮೆ ಉದ್ಯಮ ಲಕ್ಷಾಂತರ ಯುವಕರಿಗೆ ಕೆಲಸ ನೀಡುವ ಸಾಮಥ್ರ್ಯ ಹೊಂದಿದೆ. ರೇಷ್ಮೆಗೂಡು ಬೆಲೆ ಕುಸಿತದಿಂದಾಗಿ ರೇಷ್ಮೆ ಬೆಳೆಗಾರರು ಕಂಗೆಟ್ಟಿದ್ದಾರೆ.

ಇದನ್ನೇ ಅವಲಂಬಿಸಿದ್ದಅನೇಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದರು. ಕೊರೊನಾ ಇವರ ಪರಿಸ್ಥಿತಿ ಮತ್ತಷ್ಟು ದಯನೀಯ ವಾಗಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದ ರೇಷ್ಮೆ ರಫ್ತಿನಿಂದಾಗಿ ಸರ್ಕಾರಕ್ಕೆ ಆದಾಯವೂ ಬಂದಿದೆ.

ಹೀಗಾಗಿ ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ರೇಷ್ಮೆ ಕೃಷಿಕರ ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ. ದೇಶದಲ್ಲಿ ಉದ್ಯೋಗ ಕಲ್ಪಿಸುವ ಸಾಮಥ್ರ್ಯವಿರುವ ಈ ಕ್ಷೇತ್ರಕ್ಕೆ ಸರ್ಕಾರ ನೆರವು ನೀಡಿ ಹೆಚ್ಚಿನ ಯುವಕರು ರೇಷ್ಮೆ ಕೃಷಿ ಮಾಡಲು ಪ್ರೋತ್ಸಾಹ ನೀಡಬೇಕು.

ಈ ಕಾರಣದಿಂದಾಗಿ ಆದಷ್ಟು ಬೇಗ ಸರ್ಕಾರ ರೈತರ ರೇಷ್ಮೆಗೂಡಿಗೆ ಬೆಂಬಲ ಬೆಲೆ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದರು.

Facebook Comments