ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ : ಡಿ.ಕೆ.ಸುರೇಶ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.2- ಸಂಸದ ಅನಂತ್ ಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥರಾಗಿದ್ದು, ಅವರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದು ಉತ್ತಮ ಎಂದು ಸಂಸದ ಡಿ.ಕೆ.ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಗತಿಪರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗೆ ತಿರುಗೇಟು ಸುರೇಶ್, ಅನಂತ್ ಕುಮಾರ್ ಹೆಗಡೆ ಸದ್ಯ ಬಿಜೆಪಿಯಲ್ಲಿ ಯಾರಿಗೂ ಬೇಡವಾದರಾಗಿದ್ದಾರೆ. ಅವರಿಗೆ ಮಾನಸಿಕ ಚಿಕಿತ್ಸೆ ಕೊಡಿಸುವುದು ಸೂಕ್ತ ಎಂದರು.

ಸ್ವಾತಂತ್ರ್ಯ ಹೋರಾಟಗಾರರು ಇರದೇ ಹೋಗಿದ್ದರೆ ಹೆಗಡೆಗೂ ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ. ಬ್ರಿಟಿಷರ ಆಳ್ವಿಕೆ ಅಥವಾ ಹಿಟ್ಲರ್ ಮಾದರಿ ಆಡಳಿತ ಇದ್ದಿದ್ದರೆ ವಾಕ್ ಸ್ವಾತಂತ್ರ್ಯ ಇರುತ್ತಿರಲಿಲ್ಲ. ಅವರು ಇಷ್ಟೊಂದು ಧೈರ್ಯವಾಗಿ ಮಾತನಾಡುತ್ತಿದ್ದಾರೆ ಅಂದ್ರೆ ಸ್ವಾತಂತ್ರ್ಯ ಹೋರಾಟಗಾರರೇ ಕಾರಣ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

ಹೆಗಡೆ ಅವರನ್ನು ಅವರೇ ಗುರುತಿಸಿಕೊಳ್ಳಬೇಕಿದೆ. ಬಿಜೆಪಿಯವರು ಮತ್ತೆ ಅವರನ್ನು ಕೈ ಹಿಡಿತಾರೇನೋ, ಮುಖ್ಯವಾಹಿನಿಗೆ ಬರಬೇಕು, ಅಧಿಕಾರ ಪಡೆಯಬೇಕು ಅಂತ ಈ ರೀತಿ ಮಾತನಾಡಿದ್ದಾರೆ. ಆ ಪಕ್ಷದ ರಾಷ್ಟ್ರೀಯ ನಾಯಕರಿಗೆ ನೈತಿಕತೆ ಇದ್ದರೆ ಅನಂತಕುಮಾರï ಹೆಗಡೆಯನ್ನು ವಜಾಗೊಳಿಸಲಿ ಎಂದು ಆಗ್ರಹಿಸಿದರು.

Facebook Comments