Saturday, April 20, 2024
Homeರಾಜಕೀಯಹೈವೋಲ್ಟೇಜ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

ಹೈವೋಲ್ಟೇಜ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು,ಮಾ.28- ಹೈವೋಲ್ಟೇಜ್ ಕ್ಷೇತ್ರವಾಗಿ ಪರಿವರ್ತನೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಸಹೋದರ ಡಿ.ಕೆ.ಸುರೇಶ್ ಅವರು ತಮ್ಮ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಿ ಫಾರಂ ನೀಡಿದರು.

ಈ ವೇಳೆ ಡಿ.ಕೆ.ಸುರೇಶ್ ಅಣ್ಣ ಡಿ.ಕೆ.ಶಿವಕುಮಾರ್ ಮತ್ತು ಅತ್ತಿಗೆ ಉಷಾ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಕುಟುಂಬ ಸಮೇತರಾಗಿ ಕಬ್ಬಾಳಮ್ಮ, ಕೆಂಕೇರಮ್ಮ ಹಾಗೂ ರಾಮನಗರದ ಚಾಮುಂಡಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದಕ್ಕೂ ಮೊದಲು ಡಿ.ಕೆ.ಸುರೇಶ್ರವರ ತಾಯಿ ಗೌರಮ್ಮ ಕಬ್ಬಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಗನ ಗೆಲುವಿಗಾಗಿ ಪ್ರಾರ್ಥಿಸಿದರು. ಡಿ.ಕೆ.ಸುರೇಶ್ ಬಿ ಫಾರಂ ಅನ್ನು ದೇವರ ಸನ್ನಿಯಲ್ಲಿಟ್ಟು ಪೂಜೆ ಸಲ್ಲಿಸಿದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆಯ ವೇಳೆ ಹಾಜರಿದ್ದರು. ನಾಮಪತ್ರ ಸಲ್ಲಿಕೆಯ ಬಳಿಕ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.

RELATED ARTICLES

Latest News