ಸಿಎಎ ವಿರುದ್ದ ತಮಿಳುನಾಡಿನಲ್ಲಿ ಬೃಹತ್ ಸಹಿ ಆಂದೋಲನಕ್ಕೆ ಸಜ್ಜು

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಜ.24-ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ), ಉದ್ದೇಶಿತ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‍ಆರ್‍ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‍ಪಿಆರ್) ವಿರುದ್ಧ ತಮಿಳುನಾಡಿನಾದ್ಯಂತ ಬೃಹತ್ ಸಹಿ ಸಂಗ್ರಹ ಆಂದೋಲನ ನಡೆಸಲು ಪ್ರಮುಖ ವಿರೋಧ ಪಕ್ಷ ಸಜ್ಜಾಗಿದೆ.

ಈ ಬೃಹತ್ ಸಹಿ ಅಭಿಯಾನಕ್ಕೆ ಕಾಂಗ್ರೆಸ್ ಮತ್ತು ಎಂಡಿಎಂಕೆ ಸಾಥ್ ನೀಡಿವೆ. ಚೆನ್ನೈನಲ್ಲಿಂದು ಡಿಎಂಕೆ ನೇತೃತ್ವದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಈ ವಿವಾದಿತ ಕಾಯ್ದೆಗಳ ವಿರುದ್ಧ ಬೃಹತ್ ಸಹಿ ಆಂದೋಲನ ನಡೆಸಲು ನಿರ್ಣಯ ಅಂಗೀಕರಿಸಲಾಯಿತು.  ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಎಂ.ಕೆ.ಸ್ಟಾಲಿನ್,ಫೆ.4ರಿಂದ 8ರವರೆಗೆ ತಮಿಳುನಾಡಿನಾದ್ಯಂತ ಇವುಗಳ ವಿರುದ್ಧ ಸಾರ್ವಜನಿಕರಿಂದ ಬೃಹತ್ ಸಹಿಗಳನ್ನು ಸಂಗ್ರಹಿಸಲಾಗುವುದು.

ನಂತರ ಇದನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು. ತಮಿಳುನಾಡಿನಲ್ಲಿ ಸಿಎಎ, ಎನ್‍ಸಿಆರ್ ಮತ್ತು ಎನ್‍ಪಿಆರ್ ಜಾರಿಗೆ ನಾವು ಅವಕಾಶ ಕೊಡುವುದಿಲ್ಲ. ಈ ನಿಟ್ಟಿನಲ್ಲಿ ನಾವು ಮೊದಲ ಹಂತವಾಗಿ ಸಹಿ ಸಂಗ್ರಹ ಆಂದೋಲನ ನಡೆಸುತ್ತಿದ್ದೇವೆ. ಇದಕ್ಕೆ ತಮಿಳುನಾಡಿನ ಜನತೆ ಸಹಕಾರ ಮತ್ತು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

Facebook Comments