ಮಂಗಳವಾರದಿಂದ ಸರ್ಕಾರಿ ವೈದ್ಯರು ಪ್ರತಿಭಟನೆ, ವೈದ್ಯಕೀಯ ಸೇವೆಗಳು ಬಂದ್..!?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರದಿಂದ ಸರ್ಕಾರಿ ವೈದ್ಯರು ಹೋರಾಟ ನಡೆಸಲು ಸಜ್ಜಾಗಿದ್ದು, ವೈದ್ಯಕೀಯ ಸೇವೆಗಳು ಅಸ್ತವ್ಯಸ್ತವಾಗಲಿವೆ. ಹಂತ ಹಂತವಾಗಿ ವೈದ್ಯಕೀಯ ಸೇವೆ ಸ್ಥಗಿತಗೊಳಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಿ ವೈದ್ಯರ ಸಂಘ ಈ ನಿರ್ಧಾರ ತೆಗೆದುಕೊಂಡಿದ್ದು, ಇದೇ ತಿಂಗಳ 15 ರಿಂದ ಅಂದರೆ ಮಂಗಳವಾರದಿಂದ ವೈದ್ಯಕೀಯ ಸೇವೆ ಮಾಡದೆ, ಆರೋಗ್ಯ ವರದಿಗಳನ್ನ ಸರ್ಕಾರಕ್ಕೆ ಸಲ್ಲಿಸದೇ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆಪ್ಟೆಂಬರ್ 15ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸುತ್ತೇವೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ವೈದ್ಯರು ಮುಷ್ಕರ ಆರಂಭಿಸಿದರೆ ಜನರಿಗೆ ತೊಂದರೆಯಾಗಲಿದೆ.

ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 15 ರಿಂದ 21ರವರೆಗೆ ಜನರಿಗೆ ಕೊರೊನಾ ವರದಿ ಸಿಗುವುದಿಲ್ಲ. ಅಷ್ಟೇ ಅಲ್ಲದೆ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ, ಹೆಚ್1ಎನ್1 ಸಂಬಂಧದ ಯಾವ ವರದಿಯೂ
ಕೂಡ ಲಭ್ಯವಿರುವುದಿಲ್ಲ.

ಈ ಕುರಿತು ಸರ್ಕಾರಕ್ಕೂ ಸಹ ಮಾಹಿತಿ ನೀಡದಿರಲು ತೀರ್ಮಾನಿಸಲಾಗಿದೆ.
ಅಲ್ಲದೆ, ಡಿಸಿ ಮತ್ತು ಸಿಇಓ ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ.
ಈ ಹಿಂದೆ ಸರ್ಕಾರದ ಮುಂದೆ ಇಟ್ಟಿದ್ದ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರ ವೈದ್ಯರ ಸಂಘ ಪ್ರತಿಭಟನೆ ನಡೆಸಲಿದೆ.

ಕಳೆದ ವಾರ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿತ್ತು. ಆದರೆ, ಇದುವರೆಗೂ ಬೇಡಿಕೆ ಈಡೇರಿಲ್ಲ.

ಸರ್ಕಾರಿ ಗುತ್ತಿಗೆ ನೌಕರರು ಮತ್ತು ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ಸರ್ಕಾರ ಅವರ ಬೇಡಿಕೆ ಈಡೇರಿಸಿತ್ತು. ಆಗ ಸರ್ಕಾರಿ ವೈದ್ಯರು ಸಹ ವೇತನ ಹೆಚ್ಚಳ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಳಿಕ ಸರ್ಕಾರಿ ವೈದ್ಯರು ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಸಲು ಸರ್ಕಾರವನ್ನು ಒತ್ತಾಯಿಸಿದ್ದರು. ಆಗ ಸರ್ಕಾರ ಭರವಸೆ ನೀಡಿದ್ದರೂ ಬೇಡಿಕೆ ಇನ್ನೂ ಈಡೇರಿಲ್ಲ ಎಂಬ ಆರೋಪ ವೈದ್ಯರದ್ದು.

# ವೈದ್ಯರ ಪ್ರಮುಖ ಬೇಡಿಕೆಗಳೇನು?
ವೇತನ ತಾರತಮ್ಯ ಸರಿಪಡಿಸಬೇಕು.
ಬೆಂಗಳೂರಿನ 48 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಿಬಿಎಂಪಿ ತೆಕ್ಕೆಯಿಂದ ಆರೋಗ್ಯ ಇಲಾಖೆಗೆ ಸೇರಿಸಬೇಕು.
ಸರ್ಕಾರದಿಂದ ವೈದ್ಯರ ದಿನಾಚರಣೆ ಆಚರಿಸಬೇಕು, ಜಿಲ್ಲಾಸ್ಪತ್ರೆಗಳನ್ನು ಮೆಡಿಕಲ್ ಕಾಲೇಜು ವ್ಯಾಪ್ತಿಗೆ ಸೇರಿಸಬಾರದು.
ವೈದ್ಯರ ವಿರುದ್ಧ ಆರೋಪ ಬಂದಾಗ ತನಿಖೆಗೂ ಮುನ್ನ ಅಮಾನತು ಮಾಡಬಾರದು.
ಕೊರೊನಾ ಕರ್ತವ್ಯ ವೇಳೆ ಮೃತಪಟ್ಟಿರುವ ವೈದ್ಯರಿಗೆ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಬೇಕು.
ಕೋವಿಡ್ ವೇಳೆ ಮೃತ ಪಟ್ಟ ವೈದ್ಯರಿಗೆ ಸರ್ಕಾರ ಪರಿಹಾರ ನೀಡಿಲ್ಲ ಪರಿಹಾರ ನೀಡಬೇಕು.
ಆರೋಗ್ಯ ಚಿಕಿತ್ಸಾ ಕೇಂದ್ರಗಳನ್ನ ವಾಪಸ್ ನೀಡುವಂತೆ ಒತ್ತಾಯ.
ಡಿಸಿ ಮತ್ತು ಸಿಇಓಗಳ ದಬ್ಬಾಳಿಕೆಯನ್ನ ತಪ್ಪಿಸಬೇಕು.

Facebook Comments

Sri Raghav

Admin