BREAKING : ಪ್ರತಿಭಟನೆ ಕೈಬಿಟ್ಟ ವೈದ್ಯರು, ಕರ್ತವ್ಯಕ್ಕೆ ಹಾಜರಾಗಲು ನಿರ್ಧಾರ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.23-ನಂಜನಗೂಡು ತಾಲ್ಲೂಕು ವೈದ್ಯಾಕಾರಿ ಡಾ.ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಸಿದಂತೆ ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಮಿಶ್ರ ಅವರ ಅಮಾನತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯರು ಹಿಂಪಡೆದು, ಕರ್ತವ್ಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ.

ಪ್ರತಿಭಟನಾನಿರತರೊಂದಿಗೆ ಸರ್ಕಾರ ನಡೆಸಿದ ಮಾತುಕತೆ ಬಹುತೇಕ ಯಶಸ್ವಿಯಾಗಿದ್ದು, ಸರ್ಕಾರಿ ವೈದ್ಯರ ಸಂಘದವರು ಇಂದು ಸಭೆ ನಡೆಸಿ ಕರ್ತವ್ಯಕ್ಕೆ ಹಾಜರಾಗಲು ತೀರ್ಮಾನಿಸಿದ್ದಾರೆ.

ಕೋವಿಡ್-19ನಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ನಾವು ಪ್ರತಿಭಟನೆ ನಡೆಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಆದರೆ ವೈದ್ಯರಿಗೆ ಕಿರುಕುಳ, ಒತ್ತಡ ಹೇರುವಂತಹ ಇದೇ ಪರಿಸ್ಥಿತಿ ಮುಂದುವರೆದರೆ ನಮ್ಮ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆ ಎಂಬ ಎಚ್ಚರಿಕೆ ನೀಡಿ ಸದ್ಯ ಮೈಸೂರಿನ ಜಿಲ್ಲಾ ಆರೋಗ್ಯ ಅಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಹೋರಾಟವನ್ನು ಹಿಂಪಡೆಯುತ್ತಿರುವುದಾಗಿ ವೈದ್ಯಾಕಾರಿಗಳ ಸಂಘದವರು ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ತಿಂಗಳಿನಿಂದ ಹಗಲಿರುಳು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ರಜೆರಹಿತವಾಗಿ ಕೆಲಸ ಮಾಡುತ್ತಿದ್ದೇವೆ. ಮೇಲಕಾರಿಗಳ ಒತ್ತಡದಿಂದ ಸಾಕಷ್ಟು ಕಿರುಕುಳವಾಗುತ್ತಿದೆ. ಹಲವು ಸೂಕ್ಷ್ಮ ಮನಸ್ಥಿತಿಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೀಗಾಗಿ ಅಕಾರಿಗಳು ವೈದ್ಯರ ಮೇಲೆ ಅನಗತ್ಯ ಪ್ರಲಾಪವನ್ನು ನಿಲ್ಲಿಸಬೇಕು. ಸರ್ಕಾರ ಅಂತಹ ಅಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದು ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ವೈದ್ಯಕೀಯ ಸಂಘದವರು ಸಭೆ ನಡೆಸಿ ವೈದ್ಯರ ಮೇಲೆ ಇದೇ ರೀತಿ ಕಿರುಕುಳ ನಡೆದರೆ ನಾವು ಕೈಕಟ್ಟಿಕೊಂಡು ಕೂರುವುದಿಲ್ಲ. ಎಲ್ಲವನ್ನು ಸಹಿಸಿಕೊಂಡು ಸುಮ್ಮನಿರುವುದಿಲ್ಲ. ಸದ್ಯಕ್ಕೆ ಪ್ರತಿಭಟನೆಯನ್ನು ಹಿಂಪಡೆಯುತ್ತಿದ್ದೇವೆ. ನಮ್ಮ ಹೋರಾಟದ ಸ್ವರೂಪ ಬದಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಡಾ.ಎಚ್.ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಿಇಒ ಪ್ರಶಾಂತ್ ಮಿಶ್ರ ಅವರೇ ಕಾರಣ ಎಂದು ಆರೋಪಿಸಿ, ಅವರನ್ನು ಅಮಾನತು ಮಾಡಬೇಕೆಂದು ಮೈಸೂರಿನಲ್ಲಿ ವೈದ್ಯರು ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಪ್ರತಿಭಟನೆಯಲ್ಲಿ ನಾಗೇಂದ್ರ ಕುಟುಂಬಸ್ಥರು ಭಾಗಿಯಾಗಿಲ್ಲ.

ಮೊದಲ ದಿನ ಅಂತ್ಯಸಂಸ್ಕಾರ ಸಂದರ್ಭದಲ್ಲಿ ಪಾಲ್ಗೊಂಡಿದ್ದನ್ನು ಹೊರತುಪಡಿಸಿದರೆ ಪ್ರತಿಭಟನೆ ಸಂದರ್ಭದಲ್ಲಿ ಪಾಲ್ಗೊಳ್ಳಲದೆ ತಟಸ್ಥವಾಗಿ ಉಳಿದಿದ್ದರು.

Facebook Comments

Sri Raghav

Admin