ಮೈಸೂರು ಜಿಲ್ಲೆಯಾದ್ಯಂತೆ ನಾಳೆ ವೈದ್ಯರ ಮುಷ್ಕರ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜೂ. 16-ಪಶ್ಚಿಮ ಬಂಗಾಳದ ಕೋಲ್ಕಾತ್ತ ಎನ್‍ಆರ್‍ಎಸ್ ವೈದ್ಯಕೀಯ ಮಹಾವಿದ್ಯಾಲಯದ ಕರ್ತವ್ಯ ನಿರತ ವೈದ್ಯರ ಮೇಲೆ ಗುಂಪೆÇಂದು ಹಲ್ಲೆ ನಡೆಸಿರುವುದನ್ನು ವಿರೋಧಿಸಿ (ಜೂ. 17) ನಾಳೆ ನಗರ ಹಾಗೂ ಜಿಲ್ಲಾದ್ಯಂತ ಎಲ್ಲ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಚಿಕಿತ್ಸಾ ವಿಭಾಗ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಳ್ಳಲಿದ್ದಾರೆ.

ನಾಳೆ ಬೆಳಿಗ್ಗೆ 6ರಿಂದ ಮಂಗಳವಾರ ಬೆಳಿಗ್ಗೆ 6ಗಂಟೆ ವರೆಎ ಹೊರರೋಗಿ ಚಿಕಿತ್ಸಾ ವಿಭಾಗ ಬಂದ್ ಮಾಡಲಾಗುವುದು ಎಂದು ಐಎಂಎ ಮೈಸೂರು ಕಾರ್ಯದರ್ಶಿ ಡಾ. ಜಯಂತ್ ತಿಳಿಸಿದ್ದಾರೆ.

ತುರ್ತು ಅಪಘಾತ ವಿಭಾಗ ಹಾಗೂ ಒಳರೋಗಿ ಸೇವೆ ಮತ್ತು ಶಸ್ತ್ರ ಚಿಕಿತ್ಸಾ ಸೇವೆಗಳು ಎಂದಿನಂತೆ ನಡೆಯಲಿದೆ ಎಂದು ತಿಳಿಸಿದರು. ನಗರ ಹಾಗೂ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ, ಕ್ಲಿನಿಕ್‍ಗಳಲ್ಲಿ ಹೊರರೋಗಿಗಳ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ