ಹಿಂದಿ ಭಾಷೆ ಹೇರಿಕೆ ಸಹಿಸಲ್ಲ: ದೊಡ್ಡರಂಗೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.27- ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲೀಷ್ ಭಾಷೆಯ ಹೇರಿಕೆಯ ರೀತಿ ನೀತಿಯನ್ನು ನಾನು ಸಹಿಸುವುದಿಲ್ಲ ಎಂದು 86ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಡಾ.ದೊಡ್ಡರಂಗೇಗೌಡ ತಿಳಿಸಿದ್ದಾರೆ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನೇನು ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Facebook Comments