ಡಬಲ್ ಮರ್ಡರ್ : ದಿಂಬಿನಿಂದ ಉಸಿರುಗಟ್ಟಿಸಿ ವೃದ್ಧ ದಂಪತಿ ಹತ್ಯೆ..!

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ,ಆ.30- ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕಣಗಳು ಮುಂದುವರೆದಿದ್ದು, ಕಳೆದ ರಾತ್ರಿ ವೃದ್ಧ ದಂಪತಿಯನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಹತ್ಯೆಗೈದಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಆಲಗೊಂಡನಹಳ್ಳಿಯಲ್ಲಿ ನಡೆದಿದೆ.

ಮುರಳೀಧರ್ (71), ಉಮಾದೇವಿ (67) ಕೊಲೆಯಾದ ವೃದ್ಧ ದಂಪತಿ.
ಈ ದಂಪತಿಗಳಿಗೆ 80 ಎಕರೆ ಜಮೀನು ಇದ್ದು, ಮಕ್ಕಳು ಇರಲಿಲ್ಲ. ತೋಟದ ಮನೆಯಲ್ಲಿ ವಾಸವಿದ್ದ ಮುರಳೀಧರ ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರಿಂದ ಅವರಿಗೆ ಜಮೀನು ಬಳುವಳಿಯಾಗಿ ಬಂದಿತ್ತು.

ಬಿಎಸ್ಸಿ ಅರ್ಗಿಕಲ್ಚರ್ ವ್ಯಾಸಂಗ ಮಾಡಿದ್ದ ಮುರಳೀಧರ್ ಕೃಷಿಯಲ್ಲಿ ಆಸಕ್ತಿ ಹೊಂದಿದ್ದರು. ಬೇಸಾಯ ಮಾಡಿಕೊಂಡು ಜಮೀನಿನಲ್ಲೇ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದರು.

ಇತ್ತೀಚೆಗೆ ಕೆಲವು ಎಕರೆ ಜಮೀನನ್ನು ಮಾರಾಟ ಮಾಡಿದ್ದರು. ಆದರೆ, ರಾತ್ರಿ ದಂಪತಿಗೆ ದಿಂಬಿನಿಂದ ಉಸಿರುಗಟ್ಟಿಸಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಎಸ್ಪಿ ಶ್ರೀನಿವಾಸ್‍ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣಗಳು ಹೆಚ್ಚುತ್ತಿದ್ದು, ಜನತೆ ಆತಂಕಕ್ಕೀಡಾಗಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಸ್ತಿಗಾಗಿ ಅಥವಾ ಜಮೀನು ಮಾರಿದ್ದ ಹಣಕ್ಕಾಗಿ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

Facebook Comments

Sri Raghav

Admin