ಬಿಎಂಸಿ ಸ್ಟಾಫ್‍ ನರ್ಸ್‍ಗಳ ಬೇಡಿಕೆ ಈಡೇರಿಕೆಗೆ ಸಚಿವ ಸುಧಾಕರ್ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.1- ಆದಷ್ಟು ಬೇಗ ನಿಮ್ಮ ಬೇಡಿಕೆಗಳನ್ನು ಈಡೇರಿಸುತ್ತೇವೆ. ತಕ್ಷಣ ಕಾರ್ಯಪ್ರವೃತ್ತರಾಗಿ ಎಂದು ಬೆಂಗಳೂರು ಮೆಡಿಕಲ್ ಕಾಲೇಜು ಸ್ಟಾಫ್‍ನರ್ಸ್‍ಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭರವಸೆ ನೀಡಿದ್ದಾರೆ.

ಕಳೆದ ಮೂರು ದಿನಗಳಿಂದ ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್‍ಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾ ವಿಚಾರದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಸ್ಟಾಫ್ ನರ್ಸ್‍ಗಳಿಗೆ ಅನ್ಯಾಯ ಮಾಡಿದೆ. ಆರೋಗ್ಯ ಇಲಾಖೆಯ ಸ್ಟಾಫ್‍ನರ್ಸ್‍ಗಳಿಗೆ ನೀಡುತ್ತಿರುವ ಸೌಲಭ್ಯ ನಮಗೂ ಸಿಗಬೇಕು. ನೂತನ ಪಿಂಚಣಿ ಯೋಜನೆ ಜಾರಿಗೊಳಿಸಬೇಕು.

ಕೊರೊನಾ ಕಾರ್ಯದಲ್ಲಿ ನಿರತರಾಗಿರುವ ನರ್ಸ್‍ಗಳಿಗೆ ಪೆÇ್ರೀತ್ಸಾಹಧನ ನೀಡಬೇಕು. ಮೂಲ ವೇತನದ ಶೇ.50ರಷ್ಟು ಹೆಚ್ಚುವರಿ ವೇತನ ನೀಡುವಂತೆ ನರ್ಸ್‍ಗಳು ಆಗ್ರಹಿಸಿದ್ದಾರೆ.

ಇಂದು ಕೂಡ ಮೆಡಿಕಲ್ ಕಾಲೇಜು ಮುಂಭಾಗ ಕಪ್ಪುಪಟ್ಟಿ ಧರಿಸಿ ಸ್ಟಾಫ್‍ನರ್ಸ್‍ಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಟಾಫ್ ನರ್ಸ್‍ಗಳ ಪ್ರತಿಭಟನೆ ವಿಚಾರ ತಿಳಿಯುತ್ತಿದ್ದಂತೆ ಟ್ವಿಟ್ ಮಾಡಿರುವ ಸುಧಾಕರ್ ಅವರು ಆದಷ್ಟು ಬೇಗ ನಿಮ್ಮ ಬೇಡಿಕೆ ಈಡೇರಿಕೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ.

ಕೊರೊನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ನಿಮ್ಮ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

Facebook Comments

Sri Raghav

Admin