ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.1-ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ಕೊರತೆ ಅಗಬಾರದು ಎಂದು ಮಹಾನಗರ ಪಾಲಿಕೆಗಳ ಅಯುಕ್ತರಿಗೆ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ್ ಸೂಚಿಸಿದ್ದಾರೆ.  ರಾಜ್ಯದ ಹತ್ತು ಮಹಾನಗರ ಪಾಲಿಕೆಗಳಾದ ಮೈಸೂರು, ಶಿವಮೊಗ್ಗ, ಮಂಗಳೂರು, ದಾವಣಗೆರೆ, ಬೆಳಗಾವಿ, ತುಮಕೂರು, ವಿಜಯಪುರ, ಹುಬ್ಬಳ್ಳಿ ಧಾರವಾಡ, ಬಳ್ಳಾರಿ, ಕಲಬುರಗಿ ನಗರಗಳ ಅಯುಕ್ತರೂಂದಿಗೆ ಸಚಿವರು ಅವರ ಮೊಬೈಲ್ ಫೋನ್ ಮೂಲಕ ಮಾತನಾಡಿ ಈ ಸೂಚನೆ ನೀಡಿದರು.

ಎಲ್ಲಾ ಮಹಾನಗರ ಪಾಲಿಕೆ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ‌ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವೈರಸ್ ತಡೆಗಟ್ಟಲು ಕೈಗೊಂಡ ಕ್ರಮಗಳು ಹಾಗೂ ಅದರ ಜಾರಿ ಯಾವ ರೀತಿ ಇದೆ ಎಂದು ಮಾಹಿತಿ ಪಡೆದರು. ನಗರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ದಿನನಿತ್ಯದ ಅಗತ್ಯ ವಸ್ತುಗಳ ಖರೀದಿಸಲು ಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಮಾರುಕಟ್ಟೆ ಸ್ಥಳಾಂತರ, ಪೌರ ಕಾರ್ಮಿಕ ವರ್ಗದವರ ಆರೋಗ್ಯದ ಮೇಲೆ ನಿಗಾ ವಹಿಸುವ ಮೂಲಕ ಅವರಿಗೆ ಕಾಲಕ್ಕೆ ತಪಾಸಣೆ ಮಾಡಿ ಎಂದು ಸೂಚಿಸಿದರು. ಕೊರೋನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಮಾಡಲಾಗಿದ್ದು, ಕರ್ನಾಟಕದಾದ್ಯಂತ ಅದು ಜಾರಿಯಲ್ಲಿದೆ.

ಮಹಾನಗರ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕು ತಗುಲುವುದನ್ನು ತಡೆಗಟ್ಟಿದರೆ, ಅದು ಇತರೆ ಪ್ರದೇಶಗಳಿಗೆ ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಅದಕ್ಕೆ ಕ್ವಾರಂಟೈನ್ ಅಗಿರುವ ವ್ಯಕ್ತಿಗಳು ಬಳಸಿರುವ ಮಾಸ್ಕ್ ಸೇರಿದಂತೆ ಹಲವು ಬಯೋ ವೆಸ್ಟ್ ವಸ್ತುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಸಚಿವರು ಸೂಚಿಸಿದ್ದಾರೆ.

ಈ ರೀತಿಯ ವಿಲೇವಾರಿಗೆ ಅರೋಗ್ಯ ಇಲಾಖೆ ಸಹಾಯ ಪಡೆಯಲು ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಬಯೋಮೆಡಿಕಲ್ ವೆಸ್ಟ್ ಅನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿದ್ದು, ಇದನ್ನು ಇತರೆ ಪಾಲಿಕೆಗಳು ಅನುಸರಿಸಬೇಕು ಎಂದು ಸೂಚನೆ ನೀಡಿದರು.

ಹತ್ತು ಮಹಾನಗರ ಪಾಲಿಕೆಗಳು ಸರ್ಕಾರ, ಜಿಲ್ಲಾಡಳಿತ, ಅರೋಗ್ಯ ಇಲಾಖೆ ಸಹಯೋಗದೊಂದಿಗೆ ಕೆಲಸ ಮಾಡಲು ಸೂಚನೆ ನೀಡಿದರು. ಪ್ರತಿ ದಿನ ಪಾಲಿಕೆಗಳು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ತಮಗೆ ನೀಡಬೇಕು ಎಂದು ಸಚಿವರು ಸೂಚಿಸಿದರು.

Facebook Comments

Sri Raghav

Admin