ಇಬ್ಬರು ನೈಜೀರಿಯಾದ ಡ್ರಗ್‌ಪೆಡ್ಲರ್‌ಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.22- ಸಿಸಿಬಿ ಪೊಲೀಸರು ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ 12 ಗ್ರಾಂ ತೂಕದ ಎಂಡಿಎಂಎ ಮತ್ತು 20 ಗ್ರಾಂ ಕೊಕೈನ್ ವಶಪಡಿಸಿಕೊಂಡಿದ್ದಾರೆ. ಅಗಸ್ಟೇನ್ ಒಕಾಫರ್ ಮತ್ತು ಅಚುನಿಕೆ ನ್ವಾಫರ್ ಬಂಧಿತರು.

ಆರ್‍ಟಿನಗರದಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೆರೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ದ ಎಡಿಪಿಎಸ್ ಮತ್ತು ವಿದೇಶಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments