ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಡ್ರಗ್ ಪೆಡ್ಲರ್‌ಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.23- ಸಿಸಿಬಿ ಪೊಲೀಸರು ಇಬ್ಬರು ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ 56 ಎಕ್ಸಾಟಸಿ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ದೇಶದ ಚುಕ್ವೂ ಇಮೆಕ್(24) ಮತ್ತು ಆ್ಯಮ್‍ಸಿಲಮ್ ಚಿರೋಜ್(35) ಬಂಧಿತರು.

ಇಂದಿರಾನಗರದಲ್ಲಿ ಇವರಿಬ್ಬರು ಮಾದಕವಸ್ತು ವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತ ರಾದ ಸಿಸಿಬಿ ಪೊಲೀಸರು ಸ್ಥಳಕ್ಕೆ ತೆರಳಿ ನೈಜೀರಿಯಾ ದೇಶದ ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿ ದ್ದಾರೆ.

Facebook Comments