ಡ್ರಗ್ಸ್ ದಂಧೆ : ಮತ್ತೊಬ್ಬ ಆರೋಪಿ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.21- ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ವಿನಯ್ ಕುಮಾರ್ ಬಂಧಿತ ಆರೋಪಿ. ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಗ್ಸ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆತಪ್ಪಿಸಿಕೊಂಡಿದ್ದ. ಈತನಿಗಾಗಿ ಸಿಸಿಬಿ ಪೊಲೀಸರು ಎಲ್ಲಾ ಕಡೆ ಶೋಧ ನಡೆಸಿದ್ದರು. ಇದೀಗ ಈತನನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಸೇರಿದಂತೆ ಹಲವರನ್ನು ಈಗಾಗಲೇ ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಸಿಸಿಬಿ ಪೊಲೀಸರು ಇನ್ನೂ ಶೋಧ ಕಾರ್ಯ ನಡೆಸುತ್ತಿದ್ದಾರೆ.

Facebook Comments