ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು ,ಜ.9- ದ್ವಿಚಕ್ರ ವಾಹನದಲ್ಲಿ ಬಂದು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಸಿ, ಆತನಿಂದ 8.24 ಲಕ್ಷ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ.
ಆಫ್ರಿಕಾ ಖಂಡದ ಐವೊರಿನಿ ದೇಶದ ಜಾಗೋ ಎಂಬಾತ ಬಂತ ಆರೋಪಿ.

ಜಯನಗರ ಒಂದನೇ ಬ್ಲಾಕ್ ಲಾಲ್‍ಬಾಗ್ ಸಿದ್ದಾಪುರ ಕಲ್ಯಾಣಿ ಬಳಿ ದ್ವಿಚಕ್ರ ವಾಹನದಲ್ಲಿ ಬಂದು ಮಾದಕ ವಸ್ತು ಕೊಕೈನ್ ಮಾರಾಟ ಮಾಡುವಾಗ ಪೊಲೀಸರು ಆರೋಪಿಯನ್ನು ಬಂಸಿದ್ದು, ಕೃತ್ಯಕ್ಕೆ ಬಳಸಿದ ಹೋಂಡಾ ಆಕ್ಟಿವಾ ವಾಹನ, 103ಗ್ರಾಂ ಕೊಕೇನ್ ಮಾದಕ ವಸ್ತು, 2 ಸಾವಿರ ನಗದು, ತೂಕಮಾಡುವ ಎಲೆಕ್ಟ್ರಾನಿಕ್ ಯಂತ್ರ ಹಾಗೂ 1 ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಈ ಹಿಂದೆ ಈತ ಹೆಣ್ಣೂರು ಮತ್ತು ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಪ್ರಕರಣ ದಲ್ಲಿ ಬಂಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಕಾರ್ಯಾಚರಣೆ ಯಶಸ್ವಿಗೊಳಿಸಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್, ಅಪರ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಅಭಿನಂದಿಸಿದ್ದಾರೆ.

Facebook Comments

Sri Raghav

Admin