ಡ್ರಗ್ಸ್ ಕೇಸ್ : ಮಾಜಿ ಸಚಿವರ ಪುತ್ರ ಸೇರಿ ಮೂವರು ಅರೆಸ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.9- ಡ್ರಗ್ಸ್ ಜಾಲದಲ್ಲಿ ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ್ ಲಮಾಣಿ ಸೇರಿದಂತೆ ಮೂರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡಾರ್ಕ್‍ನೆಟ್ ಮೂಲಕ ಡ್ರಗ್ಸ್ ತರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದರು.

ಅದರಲ್ಲಿ ಪ್ರಮುಖ ಆರೋಪಿಗಳಾಗಿದ್ದ ಹೆಮಂತ್ ಮತ್ತು ಸುನೀಶ್ ಎಂಬಿಬ್ಬರು ಪರಾರಿಯಾಗಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಗಳು ಗೋವಾದಲ್ಲಿ ತಲೆ ಮರೆಸಿಕೊಂಡಿರುವ ಮಾಹಿತಿ ಸಿಕ್ಕಿತ್ತು.

ಅಲ್ಲಿಗೆ ತೆರಳಿದ ಪೊಲೀಸರು ಆರೋಪಿಗಳನ್ನು ಬಂಧಿಸುವಾಗ ಅವರೊಂದಿಗೆ ದರ್ಶನ್ ಲಮಾಣಿ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಆರೋಪಿಗಳಿಗೆ ಆಶ್ರಯ ನೀಡಿ, ಅವರಿಗೆ ಸಹಾಯ ಮಾಡಿದ ಆರೋಪಕ್ಕಾಗಿ ದರ್ಶನ್ ಲಮಾಣಿ ಅವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರ ವಶಕ್ಕೆ ಪಡೆಯಲಾಗಿದೆ.

ಮುಂದಿನ ಹಂತದಲ್ಲಿ ಡ್ರಗ್ಸ್ ಖರೀದಿಯಲ್ಲಿ ಆರೋಪಿಗಳ ಪಾತ್ರವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Facebook Comments

Sri Raghav

Admin