ಡ್ರಗ್ಸ್ ಪ್ರಕರಣದಲ್ಲಿ ಸಿನಿಮಾ ನಿರ್ಮಾಪಕನ ವಿಚಾರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಅ.21- ಡ್ರಗ್ಸ್ ಜಾಲದ ಬಗ್ಗೆ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು ಮಾಲ್‍ವೊಂದರ ಮಾಲೀಕ ಹಾಗೂ ಚಿತ್ರ ನಿರ್ಮಾಪಕರೊಬ್ಬರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ಇಬ್ಬರಿಗೂ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಇಂದು ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರು ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾ ಹಾಗೂ ಇತರೆ ಆರೋಪಿಗಳು ಪಾರ್ಟಿ ನಡೆಸಿದ್ದರಾ? ಆ ಪಾರ್ಟಿಗಳಿಗೆ ಯಾರ್ಯಾರು ಬರುತ್ತಿದ್ದರು? ಪಾರ್ಟಿ ವೇಳೆ ಡ್ರಗ್ಸ್ ಸರಬರಾಜು ಆಗುತ್ತಿತ್ತಾ? ಎಂಬಿತ್ಯಾದಿ ವಿಷಯಗಳ ಬಗ್ಗೆ ಚಿತ್ರ ನಿರ್ಮಾಪಕ ಹಾಗೂ ಬಿಲ್ಡರ್‍ನ್ನು ವಿಚಾರಣೆಗೊಳಪಡಿಸಿದ್ದಾರೆ.

ಅದೇ ರೀತಿ ಮಾಲ್ ಮಾಲೀಕರಿಗೂ ಸಹ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಂಡಿರುವ ಸಿಸಿಬಿ ಪೊಲೀಸರು ಬಂಧಿತರಾಗಿರುವ ಆರೋಪಿಗಳು ನಿಮಗೆ ಗೊತ್ತೆ? ಅವರುಗಳ ಪರಿಚಯ ಹೇಗಾಯಿತು? ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Facebook Comments