ಸ್ಯಾಂಡಲ್‍ವುಡ್‍ ಕೆಲ ನಟ-ನಟಿಯರ ಡ್ರಗ್ಸ್ ನಶೆ ಇಳಿಸಲು ಸಜ್ಜಾದ ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.30- ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವವರನ್ನು ಹೆಡೆಮುರಿ ಕಟ್ಟಿ ಚಿತ್ರರಂಗಕ್ಕೆ ಬಿಸಿ ಮುಟ್ಟಿಸಿದ್ದ ರಾಜ್ಯ ಪೊಲೀಸರು, ಈಗ ಮಾದಕ ವಸ್ತುಗಳ ದಂಧೆಯಲ್ಲಿ ಮತ್ತೊಮ್ಮೆ ಸ್ಯಾಂಡಲ್ ವುಡ್‍ನ ಚಳಿಜ್ವರ ಬಿಡಿಸಲು ಸಜ್ಜಾಗಿದ್ದಾರೆ.

ಅನಿಕಾಳ ವಿಚಾರಣೆ ಬಳಿಕ ಕನ್ನಡ ಚಿತ್ರರಂಗದ ಡ್ರಗ್ಸ್ ಲಿಂಕ್ ಒಂದೊಂದಾಗಿ ಹೊರ ಬರುತ್ತಿದ್ದು, ಸಭ್ಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಖ್ಯಾತ ನಟ-ನಟಿಯರು, ಸಂಗೀತ ನಿರ್ದೇಶಕರು, ತಂತ್ರಜ್ಞರು, ನಿರ್ಮಾಪಕರ ಹೆಸರುಗಳು ದಂಧೆಯಲ್ಲಿ ಕೇಳಿ ಬರುತ್ತಿವೆ. ಕೇಂದ್ರ ಸರ್ಕಾರದ ಅೀನದಲ್ಲಿರುವ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳ (ಎನ್‍ಸಿಬಿ) ಹಗರಣವನ್ನು ತನಿಖೆ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು, ಎನ್‍ಸಿಬಿ ತನಿಖೆ ಬಳಿಕ ರಾಜ್ಯ ಪೊಲೀಸರು ಡ್ರಗ್ಸ್ ದಂಧೆಯ ವಿಚಾರಣೆಯನ್ನು ಮುಂದುವರೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮಾದಕ ವಸ್ತುಗಳ ವಿರುದ್ಧ ರಾಜ್ಯ ಪೊಲೀಸರು ಈಗಾಗಲೇ ಸಮರ ಸಾರಿದ್ದಾರೆ. ಡ್ರಗ್ಸ್ ಪೆಡ್ಲರ್‍ಗಳು, ಮಧ್ಯವರ್ತಿಗಳು ಮತ್ತು ಮಾದಕ ವ್ಯಸನಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಚಲನ ಚಿತ್ರರಂಗದ ನಟ-ನಟಿಯರು ಹಾಗೂ ಇತರರು ಮಾದಕ ವಸ್ತು ಮಾರಾಟಗಾರರ ಜತೆ ಸಂಪರ್ಕದಲ್ಲಿರುವ ಮಾಹಿತಿ ಇದೆ. ಈಗಾಗಲೇ ಮೂವರು ಡ್ರಗ್ ಪೆಡ್ಲರ್‍ಗಳನ್ನು ಬಂಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕೆಲವು ನೈಜೀರಿಯಾ ಪ್ರಜೆಗಳು ಈ ದಂಧೆಯಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಪಾಸ್‍ ಪೋರ್ಟ್ ಕಚೇರಿಯಿಂದ ವಿದೇಶಿ ಪ್ರಜೆಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. ಮಾದಕ ವಸ್ತು ಎಂಬುದು ಸಾಮಾಜಿಕ ಪಿಡುಗು ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ.

ಸದ್ಯಕ್ಕೆ ಎನ್‍ಸಿಬಿಯ ತನಿಖೆ ನಡೆಯುತ್ತಿದೆ. ಅದು ಮುಗಿದ ಬಳಿಕ ರಾಜ್ಯ ಪೊಲೀಸರು ತನಿಖೆಯನ್ನು ಮುಂದುವರೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

ಈ ನಡುವೆ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಮತ್ತು ಸೇವನೆ ವಿರುದ್ಧ ನಗರ ಪೊಲೀಸರು ಸೇರಿದಂತೆ ಕರ್ನಾಟಕ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ. ಆನ್‍ಲೈನ್ ವಹಿವಾಟಿನ ಮೇಲೂ ಕಣ್ಣಿಟ್ಟಿದ್ದೇವೆ ಎಂದು ಹೇಳಿದರು.

ಈ ಮೊದಲು ಕ್ರಿಕೆಟ್ ಬೆಟ್ಟಿಂಗ್ ದಂಧೆಯ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಅನೇಕ ಬುಕ್ಕಿಗಳನ್ನು ಹೆಡೆಮುರಿ ಕಟ್ಟಿದ್ದರು. ಚಿತ್ರರಂಗದ ಅನೇಕರ ವಿಚಾರಣೆಯನ್ನು ನಡೆಸಿದ್ದರು.

Facebook Comments

Sri Raghav

Admin